/newsfirstlive-kannada/media/media_files/2025/10/25/mys-death-2025-10-25-09-41-28.jpg)
ಮೈಸೂರು: ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ಅಕ್ಕ-ತಂಗಿಯರಿಬ್ಬರು ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ. ಬೆಟ್ಟದಪುರ ಗ್ರಾಮದ ಸಹೋದರಿಯರಾದ ಗುಲ್ಫರ್ಮ್ ತಾಜ್ (20) ಹಾಗೂ ಸಿಮ್ರಾನ್ ತಾಜ್ (23) ದುರಂತ ಅಂತ್ಯ ಕಂಡ ಯುವತಿಯರು.
ಅಷ್ಟಕ್ಕೂ ಏನಾಯ್ತು..?
ಸಹೋದರಿಯರಾದ ಗುಲ್ಫರ್ಮ್ ತಾಜ್ ಹಾಗೂ ಸಿಮ್ರಾನ್ ತಾಜ್ ಒಟ್ಟಿಗೆ ಸ್ನಾನ ಮಾಡಲೆಂದು ಹೋಗಿದ್ದಾರೆ. ಈ ವೇಳೆ ಬಾತ್​ರೂಂನಲ್ಲಿದ್ದ ಗ್ಯಾಸ್ ಗೀಸರ್​ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿದೆ. ಇದರ ಪರಿಣಾಮದಿಂದಾಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸ್ನಾನದ ಕೋಣೆಗೆ ಹೋದವರು ಬಹಳ ಸಮಯವಾದರೂ ಹೊರಬಾರದ ಹಿನ್ನಲೆ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ.
ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ಬಾಗಿಲು ಹೊಡೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರವುದು ಬೆಳಕಿಗೆ ಬಂದಿದೆ. ಕೂಡಲೇ ಸಹೋದರಿಯರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಅಷ್ಟರಲ್ಲೇ ಇಬ್ಬರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬಾತ್​ರೂಂನಲ್ಲಿ ಕಿಟಕಿ ಇಲ್ಲದ ಹಿನ್ನಲೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us