Advertisment

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ದಾರುಣ ಅಂತ್ಯ

ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ದಾರುಣ ಅಂತ್ಯ ಕಂಡಿದ್ದಾರೆ. ದಸರಾ ರಜೆ ಹಿನ್ನೆಲೆ ಮಕ್ಕಳು ಕೆರೆಗೆ ಈಜಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಮೈಸೂರಿನಲ್ಲಿ ಈ ದುರಂತ ನಡೆದಿದೆ.

author-image
Ganesh Kerekuli
mys neerupalu
Advertisment

ಮೈಸೂರು: ಕೆರೆಗೆ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಮೋಹಿತ್ (9) ಮತ್ತು ಆರ್ಯ (9) ಮೃತ ದುರ್ದೈವಿಗಳಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Advertisment

ಆಗಿದ್ದೇನು?

ಮೃತ ಬಾಲಕರಾದ ಮೋಹಿತ್​​ ಮತ್ತು ಆರ್ಯ ದಸರಾ ರಜೆ ಹಿನ್ನಲೆ ಬದನವಾಳು ಗ್ರಾಮದಲ್ಲಿರುವ ಕೆರೆಗೆ ಈಜಲು ಹೋಗಿದ್ದರು. ಸೈಕಲ್​ನಲ್ಲಿ ತೆರಳಿದ್ದ ಇಬ್ಬರು ಬಾಲಕರು ಕೆರೆ ಬಳಿ ಬಟ್ಟೆಯನ್ನ ಬಿಚ್ಚಿ ಈಜಲು ಇಳಿದಿದ್ದಾರೆ. ಆದ್ರೆ ಕೆರೆಯ ಸುಳಿಗೆ ಸಿಲುಕಿ ಮೇಲೆ ಬರಲಾಗದೆ ಇಬ್ಬರು ಸಾವನ್ನಪ್ಪಿದ್ದಾರೆ. 
ಮೋಹಿತ್ ಎಂಬ ಬಾಲಕ ಮೂರನೇ ತರಗತಿ ಹಾಗೂ ಆರ್ಯ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸದ್ಯ ಸ್ಥಳಕ್ಕೆ ಕವಲಂದೆ ಪೊಲೀಸ್ ಪಿಎಸ್ಐ ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

DCC Bank Election; ಇವತ್ತೇ ವೋಟಿಂಗ್, ಕೌಂಟಿಂಗ್, ರಿಸಲ್ಟ್​.. ಯಾರಿಗೆ ಒಲಿಯುತ್ತಾಳೆ ವಿಜಯಲಕ್ಷ್ಮಿ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

two boys drown in lake Mysore news
Advertisment
Advertisment
Advertisment