/newsfirstlive-kannada/media/media_files/2026/02/17/shaila-kd-2026-02-17-15-02-56.jpg)
ಬೆಂಗಳೂರು: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ (ರಿ) ನೂತನ ರಾಜ್ಯಾಧ್ಯಕ್ಷರಾಗಿ ಶೈಲಾ ಕೆ.ಡಿ. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು (ಫೆ.17) ನಡೆದ ರಾಜ್ಯ ಪರಿಷತ್ ಕಾರ್ಯಕಾರಿಣಿ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಹಿರಿಯ ಉಪಾಧ್ಯಕ್ಷರಾದ ಜಿ. ನೀಲಕಂಠ ಸ್ವಾಮಿ ಅವರು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿದರು.
ಇದನ್ನೂ ಓದಿ:ಹಾರ್ದಿಕ್ ಕ್ರೇಜಿ ಪರ್ಸನ್ ಯಾಕೆ..? ಪಾಂಡ್ಯರ ಶ್ರೀಮಂತಿಗೆ ಹೇಗಿದೆ..?
/filters:format(webp)/newsfirstlive-kannada/media/media_files/2026/02/17/shaila-kd-1-2026-02-17-15-03-09.jpg)
ಸರ್ವಾನುಮತದ ಆಯ್ಕೆ
ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಒಮ್ಮತದಿಂದ ಶ್ರೀಮತಿ ಶೈಲಾ ಕೆ.ಡಿ. ಅವರನ್ನು ಬೆಂಬಲಿಸಿದ್ದು, ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳು ಹೂಗುಚ್ಛ ನೀಡಿ ಅಭಿನಂದಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ರಸ್ತೆ ದಾಟುತ್ತಿದ್ದ ಯುವತಿಗೆ ಬುಲೆಟ್ ಬೈಕ್ ಡಿಕ್ಕಿ : ಆಸ್ಪತ್ರೆಯಲ್ಲಿ ಯುವತಿ ಸಾವು
/filters:format(webp)/newsfirstlive-kannada/media/media_files/2026/02/17/shaila-kd-2-2026-02-17-15-03-27.jpg)
ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ - ಶೈಲಾ ಕೆ.ಡಿ:
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಶೈಲಾ ಕೆ.ಡಿ., "ಮುನಿಸಿಪಲ್ ನೌಕರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಅರಿವು ನನಗಿದೆ. ಎಲ್ಲ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಹಂತ ಹಂತವಾಗಿ ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ," ಎಂದು ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ನೌಕರರ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕಿಶನ್​​ ಯಶಸ್ಸಿನ ಹಿಂದೆ ಅದಿತಿ ಹುಂಡಿಯಾ.. ಕೋಟಿ, ಕೋಟಿ ಓಡತಿ, ಯಾರು ಈ ಚೆಲುವೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us