Advertisment

ಡಿಸೆಂಬರ್ 31 ರಂದು ಬೆಂಗಳೂರು ಭದ್ರತೆಗೆ 20,000 ಪೊಲೀಸರ ನಿಯೋಜನೆ -ಕಟ್ಟುನಿಟ್ಟಿನ ಕ್ರಮಕ್ಕೆ CM ಸೂಚನೆ

ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಇವತ್ತು ಹೊಸ ವರ್ಷಕ್ಕೆ ಅಧಿಕಾರಿಗಳು ಮಾಡಿಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

author-image
Ganesh Kerekuli
cm siddaramaiah
Advertisment

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

Advertisment

ಸಿಎಂ ಸಿದ್ದರಾಮಯ್ಯ ಇವತ್ತು ಹೊಸ ವರ್ಷಕ್ಕೆ ಅಧಿಕಾರಿಗಳು ಮಾಡಿಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಹಿರಿಯ ಪೊಲೀಸರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. 

ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು. ಮಹಾತ್ಮಾ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. 

ಇದನ್ನೂ ಓದಿ: ನನ್ನ ಬಿಟ್ಟು ಯಾರೇ ಬಿಗ್​ಬಾಸ್ ಗೆದ್ದರೂ ಅದು ಸರಿ ಇಲ್ಲ -ಮಾಳು ಆಕ್ರೋಶ

Advertisment

new year (8)

ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು. ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. 

ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು. ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಅಂಬುಲೆನ್ಸ್ ಗಳನ್ನು ವ್ಯವಸ್ಥೆ ಮಾಡಬೇಕು. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ. 

ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು. ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ತಿಳಿಸಿದ್ದಾರೆ. 

Advertisment

ಇದನ್ನೂ ಓದಿ: ಸಿಎಂರಿಂದ ಮೂಲಸೌಕರ್ಯ ಅಭಿವೃದ್ದಿ ಯೋಜನೆ ಪ್ರಗತಿ ಪರಿಶೀಲನೆ: ರೈಲ್ವೇ ಯೋಜನೆಗೆ ಶೀಘ್ರ ಭೂಸ್ವಾಧೀನಕ್ಕೆ ಸೂಚನೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

New year CM SIDDARAMAIAH
Advertisment
Advertisment
Advertisment