Advertisment

ಮುಜರಾಯಿ ದೇವಾಲಯಗಳಲ್ಲಿ ನಾಳೆ ಗೋ ಪೂಜೆಗೆ ಆದೇಶ : ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಆದೇಶ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನವಾದ ನಾಳೆ( ಅಕ್ಟೋಬರ್ 22, 2025) ಗೋಪೂಜೆ ನಡೆಸಲು ಆದೇಶ ಹೊರಡಿಸಲಾಗಿದೆ. ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರ ಮೌಖಿಕ ಸೂಚನೆ ಮೇರೆಗೆ ಮುಜರಾಯಿ ಇಲಾಖೆಯ ಆಯುಕ್ತರು ಗೋಪೂಜೆಗೆ ಆದೇಶ ಹೊರಡಿಸಿದ್ದಾರೆ.

author-image
Chandramohan
MUJARAYI TEMPLE GAU POOJA02

ಮುಜರಾಯಿ ಆಯುಕ್ತರ ಆದೇಶ ಪ್ರತಿ ಹಾಗೂ ಸಚಿವ ರಾಮಲಿಂಗಾರೆಡ್ಡಿ

Advertisment
  • ನಾಳೆ ಮುಜರಾಯಿ ದೇಗುಲಗಳಲ್ಲಿ ಗೋಪೂಜೆಗೆ ಆದೇಶ
  • ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಿಂದ ಗೋಪೂಜೆ
  • ಮುಜರಾಯಿ ಆಯುಕ್ತರಿಂದ ಗೋ ಪೂಜೆ ನಡೆಸಲು ಆದೇಶ

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸೂಚನೆ ನೀಡಿದೆ.  ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ನಡೆಸಲು ಸುತ್ತೋಲೆ ಹೊರಡಿಸಲಾಗಿದೆ. ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ .   ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ, ಜನ ಜಾಗೃತಿ ಮೂಡಿಸಬೇಕಾಗಿದೆ. 
ಆದ್ದರಿಂದ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ,  ಅಕ್ಕಿ, ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚನೆ ನೀಡಲಾಗಿದೆ. 

Advertisment

GAU POOJE



ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರ ಮೌಖಿಕ ಸೂಚನೆ ಮೇರೆಗೆ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆಗೆ ಆದೇಶ ಹೊರಡಿಸುತ್ತಿರುವುದಾಗಿ  ಮುಜರಾಯಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. 

RAMALINGA REDDY


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

GAU POOJA BY STATE GOVERNMENT
Advertisment
Advertisment
Advertisment