/newsfirstlive-kannada/media/media_files/2025/09/10/bng_raghu_1-2025-09-10-19-06-57.jpg)
ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ರೌಡಿಶೀಟರ್ ಬೇಕರಿ ರಘು ಹಾಗೂ ಯಶಸ್ವಿನಿಯನ್ನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ವಿಧಿಸಿದ ಷರತ್ತುಗಳ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.
ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್​​ನಿಂದ ಕಳೆದ ತಿಂಗಳು ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಷರತ್ತಿನಂತೆ ಪ್ರತಿ ಭಾನುವಾರ ಠಾಣೆಗೆ ಬಂದು ರಘು ಸಹಿ ಹಾಕಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಈ ಸಂಬಂಧ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘನೆ ಮಾಡಿದ್ದರಿಂದ ರಘು ಹಾಗೂ ಪ್ರಕರಣದ ಮತ್ತೋರ್ವ ಆರೋಪಿ ಯಶಸ್ವಿನಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
/filters:format(webp)/newsfirstlive-kannada/media/media_files/2025/09/10/bng_raghu-2025-09-10-19-07-10.jpg)
ಕಳೆದ ತಿಂಗಳು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೇಕರಿ ರಘು ಮತ್ತು ಯಶಸ್ವಿನಿ ಎಂಬುವರನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಆದರೆ ಬಂಧನಕ್ಕೂ ಮೊದಲೇ ದೊಡ್ಡಬಳ್ಳಾಪುರ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು. ಇದಕ್ಕೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಷರತ್ತು ಉಲ್ಲಂಘನೆ ಮಾಡಿದ ಕಾರಣ ಈಗ ಬಂಧಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us