/newsfirstlive-kannada/media/media_files/2025/08/10/pm-modi-with-students-2025-08-10-14-17-35.jpg)
ಬೆಂಗಳೂರು:ಇಂದು ಪ್ರಧಾನಿ ಮೋದಿ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ ಮಾಡಿದ್ದಾರೆ. ಇದಕ್ಕೂ ಮೊದಲು KSR ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಟ್ರೈನ್ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಕೊಟ್ಟರು. ಇದಾದ ಬಳಿಕ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ ಮಾಡಿದ್ದಾರೆ.
ಇನ್ನೂ, ಇದೇ ವೇಳೆ ಹಳದಿ ಮಾರ್ಗವನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಿ ಮೋದಿ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳ ಜೊತೆಗೆ ಸ್ವಾರಸ್ಯಕರ ಮಾತನಾಡಿದ್ದಾರೆ. ಕರೆಕ್ಟ್ ಟೈಂಗೆ ನಿದ್ದೆ ಮಾಡಿ ಅಂತ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಇಷ್ಟದ ಹಾಗೂ ಬೋರಿಂಗ್ ಸಬ್ಜೆಕ್ಟ್ ಬಗ್ಗೆ ಕೂಡ ಪ್ರಧಾನಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಹಳದಿ ಮಾರ್ಗದ ಮೆಟ್ರೋ ಟ್ರೈನ್ ದರ ಹೇಗಿದೆ.. ಎಲ್ಲಿಂದ ಎಲ್ಲಿವರೆಗೆ ಎಷ್ಟು ರೂಪಾಯಿ ಕೊಡಬೇಕು?
ಮತ್ತೊಬ್ಬ ವಿದ್ಯಾರ್ಥಿನಿಗೆ ನೀನು ಯಾಕೆ ಊಟ ಮಾಡಲ್ವಾ ಎಂದು ನಗೆ ಚಟಾಕಿ ಹಾರಿಸಿದ್ದಾರೆ. ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಎಂದು ಸಲಹೆ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳ ಮುಂದೆ ನಾನು ಜಿಯೋಗ್ರಾಫಿ ಓದುವುದರಲ್ಲಿ ಡಲ್ ಇದ್ದೇ. ಜಿಯೋಗ್ರಾಫಿ ಕ್ಲಾಸ್ ತುಂಬಾ ಬೋರ್ ಆಗುತ್ತಿತ್ತು. ಜಿಯೋಗ್ರಾಫಿ ಕ್ಲಾಸ್ ನಲ್ಲಿ ನಿದ್ದೆ ಮಾಡಿದ್ದೆ ಎಂಬ ತಮ್ಮ ಬಾಲ್ಯದ ಬಗ್ಗೆ ವಿದ್ಯಾರ್ಥಿಗಳ ಮುಂದೆ ಬಿಚ್ಚಿಟ್ಟಿದ್ದಾರೆ. ಇನ್ನೂ, ಪ್ರಧಾನಿ ಜತೆ ನಡೆದ ಮಾತುಕತೆ ಬಗ್ಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ನ್ಯೂಸ್ ಫಸ್ಟ್ ಜತೆ ಸಂತಸ ಹಂಚಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ