ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ವಿಧಿವಶ

ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಶೃಂಗೇರಿ ಮಠದ ಉತ್ತರಾಧಿಕಾರಿಯಾಗಿ ನೇಮಕಗೊಂಡವರು. ಅವರನ್ನು ಶೃಂಗೇರಿ ಮಠದ ಭಾರತೀ ತೀರ್ಥ ಸ್ವಾಮೀಜಿ ಅವರು ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಿದರು

author-image
Bhimappa
CKM_purushottama_bharati
Advertisment

ಚಿಕ್ಕಮಗಳೂರು: ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ (75) ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸ್ವಾಮೀಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಪುರುಷೋತ್ತಮ ಭಾರತೀ ಸ್ವಾಮೀಜಿ ಮೃತಪಟ್ಟಿದ್ದಾರೆ. ಇವತ್ತು ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಶೃಂಗೇರಿ ಮಠದ ಉತ್ತರಾಧಿಕಾರಿಯಾಗಿ ನೇಮಕಗೊಂಡವರು. ಅವರನ್ನು ಶೃಂಗೇರಿ ಮಠದ ಭಾರತೀ ತೀರ್ಥ ಸ್ವಾಮೀಜಿ ಅವರು ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಿದರು ಮತ್ತು ಅವರ ಪಟ್ಟಾಭಿಷೇಕ ಸಮಾರಂಭವು ಏಪ್ರಿಲ್ 2014ರಲ್ಲಿ ನಡೆದಿತ್ತು. 

ಇದನ್ನೂ ಓದಿ: 1Kg ಟೊಮೆಟೊ 700 ರೂಪಾಯಿ.. ಅಫ್ಘಾನ್​ ಜೊತೆ ಗಲಾಟೆ, ತರಕಾರಿ, ದಿನಸಿಗಳ ಬೆಲೆ ಭಾರೀ ಏರಿಕೆ

purushottama_bharati

ಪುರುಷೋತ್ತಮ ಭಾರತೀ ಸ್ವಾಮೀಜಿ ಹಿನ್ನೆಲೆ

ಪುರುಷೋತ್ತಮ ಭಾರತೀ ಸ್ವಾಮೀಜಿ ಗುರುಪರಂಪರೆಯಲ್ಲಿ 19ನೇ ಪೀಠಾಧಿಪತಿಗಳು, ಶ್ರೇಷ್ಠ ವಿದ್ವಾಂಸರು ಆಗಿದ್ದರು. ಪುರುಶೋತ್ತಮ ಭಾರತೀ ಸ್ವಾಮಿಜಿ ಪೂರ್ವಾಶ್ರಮದಲ್ಲಿ ಕಮ್ಮಂಬಾಟಿ ನಾಗೇಶ್ವರ ಅವಧಾನಿಗಳು. ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಜೀಕೊಂಡೂರು ಮಂಡಲಂನ ವೆಲ್ಲಟೂರು ಗ್ರಾಮದಲ್ಲಿ ಕಮ್ಮಂಬಾಟಿ ಸೇತುಮಾಧವ ಅವಧಾನಿ ಮತ್ತು ಜಗನ್ಮಂಗಳ ಕಲ್ಯಾಣಿ ಬಾಲಾ ತ್ರಿಪುರಸುಂದರಮ್ಮ ದಂಪತಿಯ ದ್ವಿತೀಯ ಮಗನಾಗಿದ್ದರು.

1953 ಸೆಪ್ಟೆಂಬರ್ 9ರಂದು ಜನಿಸಿದ್ದರು. ವಿಜಯವಾಡದಲ್ಲಿ ತಮ್ಮ ಲೌಕಿಕ ವಿದ್ಯಾಭ್ಯಾಸವನ್ನು ಪೂರೈಸಿದ ನಂತರ ವಿಜಯವಾಡದ ಶೃಂಗೇರಿ ಮಠದಲ್ಲಿ ತಮ್ಮ ತಂದೆಯವರಿಂದ ವೇದ ವಿದ್ಯೆಯನ್ನು ಅಭ್ಯಾಸ ಮಾಡಿದರು. ಕೃಷ್ಣ ಯಜುರ್ವೇದ, ಕ್ರಮಂತಗಳನ್ನು ಪೂರ್ಣಗೊಳಿಸಿ ರಾಜಮಹೇಂದ್ರಿ, ಶೃಂಗೇರಿ ಮುಂತಾದ ಕಡೆಗಳಲ್ಲಿ ನಡೆದ ಹಲವಾರು ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದರು. ವಿದ್ವಾನ್ ಮಂಕಾಬೂಡಿ ಸುಬ್ರಹ್ಮಣ್ಯ ಶಾಸ್ತ್ರಿಗಳು ಹಾಗೂ ವೇಮೂರಿ ವೆಂಕಟೇಶ್ವರ ಸಿದ್ಧಾಂತಿ ಅವರ ಮಾರ್ಗದರ್ಶನದಲ್ಲಿ ಪಂಚ ಕಾವ್ಯ, ಜೋತಿಷ್ಯ ಶಾಸ್ತ್ರವನ್ನು ಕಲಿತುಕೊಂಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Kannada News Chikkamagaluru news
Advertisment