/newsfirstlive-kannada/media/media_files/2025/08/21/mantralaya-2025-08-21-13-52-26.jpg)
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹುಂಡಿ ತೆರೆದು, ಕಾಣಿಕೆಯಾಗಿ ಬಂದಂತಹ ಹಣ, ಚಿನ್ನ ಹಾಗೂ ಬೆಳ್ಳಿ ಎಣಿಸಲಾಗಿದೆ.
ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 22 ದಿನಗಳ ಹುಂಡಿ ಎಣಿಕೆ ಮುಕ್ತಾಯವಾಗಿದೆ. ಭಕ್ತರಿಂದ 3.35 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಆಗಸ್ಟ್ ತಿಂಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,24,52,256 ರೂಪಾಯಿ ನೋಟುಗಳು ಇವೆ.
ಇದನ್ನೂ ಓದಿ: ಮಗು ಹುಟ್ಟಲು ಮಹಿಳೆಯರ ಅವಶ್ಯಕತೆನೇ ಇಲ್ಲ.. ಜೀವಂತ ಕಂದಗೆ ಜನ್ಮ ನೀಡಲಿದೆ ರೋಬೋಟ್.!
/filters:format(webp)/newsfirstlive-kannada/media/media_files/2025/08/21/mantralaya_rcr-2025-08-21-13-52-38.jpg)
10,79,500 ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ. ಕಳೆದ 22 ದಿನಗಳಲ್ಲಿ ಒಟ್ಟು 3,35,31,756 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಇನ್ನೂ 74 ಗ್ರಾಂ ಚಿನ್ನ, 1,440 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಮಂತ್ರಾಲಯ ಮಠದಲ್ಲಿ ಪ್ರಾರಂಭವಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರಸೇವಕರು ಭಾಗಿಯಾಗಿದ್ದರು.
ಭಕ್ತರ ಕಲ್ಪವೃಕ್ಷ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ಮಠಕ್ಕೆ ರಾಜ್ಯ, ಅಂತಾರಾಜ್ಯ, ದೇಶ-ವಿದೇಶಗಳಿಂದಲೂ ಸಾಕಷ್ಟು ಭಕ್ತರು ಆಗಮಿಸಿ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯುತ್ತಾರೆ. ಅದರಂತೆ ರಾಯರ ಮಠದ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು ಕೇವಲ 22 ದಿನಗಳಲ್ಲಿ ಕೋಟಿ ಕೋಟಿ ಹಣ, ಚಿನ್ನ ಹಾಗೂ ಬೆಳ್ಳಿ ಭಕ್ತರ ಕಾಣಿಕೆಯಿಂದ ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us