/newsfirstlive-kannada/media/media_files/2026/01/21/raichuru-accident-1-2026-01-21-07-05-44.jpg)
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿವಾಳ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಮತ್ತು ಎರಡು ಪಿಕ್‌ಅಪ್ (ಬೊಲೆರೋ) ವಾಹನಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಈ ದುರಂತ ಸಂಭವಿಸಿದೆ.
ಮೃತರ ವಿವರ
ಅಪಘಾತದಲ್ಲಿ ಮೃತಪಟ್ಟವರು ಆಂಧ್ರಪ್ರದೇಶದ ಚಲ್ಲೆಕೂಡ್ಲೂರು ಗ್ರಾಮದವರು ಎಂದು ಗುರುತಿಸಲಾಗಿದೆ. ಯಲ್ಲಪ್ಪ (44), ಹರಿ (24), ರಂಗನಾಥ (12), ಬಸವರಾಜ (37) ಹಾಗೂ ಮತ್ತೊಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ.
ಘಟನೆಯ ಹಿನ್ನೆಲೆ:
ಮೃತಪಟ್ಟವರು ಬಾಗಲಕೋಟೆ ಜಿಲ್ಲೆಯ ಕುರಿ ಸಂತೆಯಲ್ಲಿ ಕುರಿಗಳನ್ನು ಖರೀದಿ ಮಾಡಿ, ಎರಡು ಪಿಕ್‌ಅಪ್ ವಾಹನಗಳಲ್ಲಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸಿಂಧನೂರಿನಿಂದ ಬಳ್ಳಾರಿ ಕಡೆಗೆ ಈ ವಾಹನಗಳು ಒಂದರ ಹಿಂದೆ ಒಂದರಂತೆ ಚಲಿಸುತ್ತಿದ್ದವು. ಈ ವೇಳೆ ಎದುರುಗಡೆಯಿಂದ ಬಂದ ಲಾರಿ ಎರಡೂ ಪಿಕ್‌ಅಪ್ ವಾಹನಗಳಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಸ್ಥಳದಲ್ಲೇ ಐವರ ಸಾವು, ಕುರಿಗಳೂ ಬಲಿ:
ಡಿಕ್ಕಿಯ ರಭಸಕ್ಕೆ ಎರಡು ಪಿಕ್‌ಅಪ್ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ವಾಹನದಲ್ಲಿದ್ದ ಹಲವಾರು ಕುರಿಗಳು ಸಹ ಅಪಘಾತದಲ್ಲಿ ಮೃತಪಟ್ಟಿವೆ. ಒಟ್ಟು ಎಂಟು ಜನ ಎರಡು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದು, ಐವರು ಜೀವ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ಗಿಲ್ ಫುಲ್ ಡಲ್.. ODI ಕ್ಯಾಪ್ಟನ್ಸಿ ಸ್ಥಾನಕ್ಕೂ ಬಂತು ಕುತ್ತು..!?
ಚಾಲಕ ನಾಪತ್ತೆ, ಪೊಲೀಸರಿಂದ ಶೋಧ
ಅಪಘಾತ ಸಂಭವಿಸಿದ ಕೂಡಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆಯುದ್ದಕ್ಕೂ ಮೃತದೇಹಗಳು ಹಾಗೂ ಕುರಿಗಳು ಬಿದ್ದಿದ್ದ ದೃಶ್ಯ ಮನಕಲಕುವಂತಿತ್ತು.
ಇದನ್ನೂ ಓದಿ:ಕೋಚ್ ಗಂಭೀರ್ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್.. ಅದೆಷ್ಟು ಸರಣಿ ಸೋಲು ಸಹಿಸೋದು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us