Advertisment

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗೆ ಲಘು ಹೃದಯಾಘಾತ; ಆಸ್ಪತ್ರೆಯಲ್ಲಿ ಚಿಕಿತ್ಸೆ

ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ಕಾರ್ಯಕ್ರಮವೊಂದರ ನಿಮಿತ್ತ ರಾಯಚೂರು ಜಿಲ್ಲೆಗೆ ಆಗಮಿಸಿದ್ದ ವೇಳೆ ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.

author-image
Ganesh Kerekuli
prasannananda swamiji of valmiki gurupeeth
Advertisment

ರಾಯಚೂರು: ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ (Prasannananda Swamiji) ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ಕಾರ್ಯಕ್ರಮವೊಂದರ ನಿಮಿತ್ತ ರಾಯಚೂರು ಜಿಲ್ಲೆಗೆ ಆಗಮಿಸಿದ್ದ ವೇಳೆ ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ.

Advertisment

ಘಟನೆಯ ವಿವರ

ಸ್ವಾಮೀಜಿ ಅವರು ಕಾರ್ಯಕ್ರಮದ ನಿಮಿತ್ತ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ನಿನ್ನೆ (ಬುಧವಾರ) ರಾತ್ರಿ ಅವರ ಆರೋಗ್ಯದಲ್ಲಿ ಏಕಾಏಕಿ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಮತ್ತು ಶಿಷ್ಯರು ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: 3 ವಿಕೆಟ್​ ಕಬಳಿಸಿ ಚಕ್ರವರ್ತಿ ಮಿಂಚು.. ಬೌಲಿಂಗ್​ನಲ್ಲೂ ದುಬೆ ದರ್ಬಾರ್​..!

ಹೈದರಾಬಾದ್‌ಗೆ ರವಾನೆ

ರಾಯಚೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ (Apollo Hospital) ಕರೆದೊಯ್ಯಲಾಗಿದೆ.

Advertisment

ಚೇತರಿಸಿಕೊಳ್ಳುತ್ತಿರುವ ಶ್ರೀಗಳು

ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ಮಠದ ಮೂಲಗಳು ತಿಳಿಸಿವೆ. ಹೀಗಾಗಿ ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ರಾಜಕುಮಾರಿ’ಗೆ ಹಾರ್ದಿಕ್ ಪಾಂಡ್ಯ ಸ್ಪೆಷಲ್ ವಿಶ್! ವೈರಲ್ ಆಯ್ತು ಲವ್ಲಿ ಪೋಸ್ಟ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Prasannananda Swamiji Heart Attack Valmiki Gurupeetha Swamiji
Advertisment
Advertisment
Advertisment