/newsfirstlive-kannada/media/media_files/2025/09/24/mahesh-timarodi-2025-09-24-12-01-47.jpg)
ಮಹೇಶ್ ಶೆಟ್ಟಿ ತಿಮರೋಡಿ Photograph: (ಮಹೇಶ್ ಶೆಟ್ಟಿ ತಿಮರೋಡಿ)
ರಾಯಚೂರು: ಸೌಜನ್ಯ ಪ್ರಕರಣ ಹೊರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನ (Mahesh Shetty Thimarodi) ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಲಾಗಿದೆ. ಬೆನ್ನಲ್ಲೇ ರಾಯಚೂರಿನ ಜನ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಿಮರೋಡಿ ಇಲ್ಲಿಗೆ ಬರೋದು ಬೇಡ, ಯಾವುದಾದರೂ ಕಾಡಿಗೆ ಕಳುಹಿಸಿ ಎಂದು ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.
ಕಾಡಿಗೆ ಕಳುಹಿಸಿ..!
ನಿನ್ನೆ ಮಹೇಶ್​ ಶೆಟ್ಟಿಯನ್ನ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರಿ ಮಾಡಲಾಗಿತ್ತು. ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ, ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.
ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿರೋದು ಅಲ್ಲಿನ ಜನರ ಕೆಂಗಣ್ಣಿಗೆ ಗುರಿಯಾಗಿದೆ. ರಾಯಚೂರು ದಲಿತಪರ ಸಂಘಟನೆ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಇಂದು ಪ್ರತಿಭಟನೆ ನಡೆದಿದೆ. ‘ನಮ್ಮ ರಾಯಚೂರು ಜಿಲ್ಲೆಯಲ್ಲಿ ಗೂಂಡಾಗಳಿಗೆ ಜಾಗವಿಲ್ಲ. ಬೇಕಾದರೆ ಮಹೇಶ್​ ತಿಮರೋಡಿಯನ್ನ ಕಾಡಿಗೆ ಕಳುಹಿಸಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಸೌಜನ್ಯ ಹೋರಾಟದಲ್ಲಿ ತೊಡಗಿಸಿ ಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಈಗ ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚೆನ್ನಯ್ಯನಿಗೆ ಆಶ್ರಯ ನೀಡಿರುವ ಆರೋಪ ಹೊತ್ತಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಒಂದು ಆನೆಗಾಗಿ 2 ಮಠಗಳ ಮಧ್ಯೆ ಫೈಟ್! ಏನಿದು ‘ಗಜ’ ಸಂಘರ್ಷ..?