/newsfirstlive-kannada/media/media_files/2026/03/06/karnataka-budget-2026-3-2026-03-06-11-23-07.jpg)
ಬೆಂಗಳೂರು: ಕವಿ ಬಿ.ಎಂ. ಬಶೀರ್ ಅವರ ಈ ಮಾರ್ಮಿಕ ಕವನದ ಸಾಲುಗಳನ್ನು ವಾಚಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಆಯವ್ಯಯದಲ್ಲಿ 'ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ'ಯ ಯೋಜನೆಗಳನ್ನು ಪ್ರಕಟಿಸಿದರು. ಗೃಹಲಕ್ಷ್ಮಿ ಯೋಜನೆಯ ಯಶಸ್ಸನ್ನು ಕೊಂಡಾಡಿದ ಅವರು, ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ರಕ್ಷಣೆಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ:
1. ಗೃಹಲಕ್ಷ್ಮಿಗೆ 28,608 ಕೋಟಿ ರೂ. ಅನುದಾನ:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯಡಿ ಈವರೆಗೆ ಅರ್ಹ ಫಲಾನುಭವಿಗಳಿಗೆ ಬರೋಬ್ಬರಿ 62,345 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಸದ್ಯ ರಾಜ್ಯದಲ್ಲಿ 1.24 ಕೋಟಿ ಮಹಿಳೆಯರು ಈ ಯೋಜನೆಯಡಿ ಯಶಸ್ವಿಯಾಗಿ ಧನಸಹಾಯ ಪಡೆಯುತ್ತಿದ್ದು, ಪ್ರಸಕ್ತ (2026-27) ವರ್ಷಕ್ಕೆ ಈ ಯೋಜನೆಗಾಗಿ ಬರೋಬ್ಬರಿ 28,608 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
2. ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ:
ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪ್ರಸ್ತುತ ಸೇವೆ ಸಲ್ಲಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ ಒಂದು ಜೊತೆ 'ಹೆಚ್ಚುವರಿ ಸಮವಸ್ತ್ರ' (Uniform) ವಿತರಿಸಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ:ಕೃಷಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂಪರ್: ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆ ಘೋಷಣೆ
3. ರಾಜ್ಯದೆಲ್ಲೆಡೆ 'ಅಕ್ಕಪಡೆ'ಯ ರಕ್ಷಣೆ:
ಮಹಿಳೆಯರು ಹಾಗೂ ಮಕ್ಕಳು ಸಂಕಷ್ಟಕ್ಕೆ ಸಿಲುಕಿದಾಗ ತಕ್ಷಣವೇ ಸ್ಪಂದಿಸಿ ರಕ್ಷಣೆ ನೀಡುವ ಉದ್ದೇಶದಿಂದ ಗೃಹ ಇಲಾಖೆಯ ಸಹಯೋಗದೊಂದಿಗೆ 'ಅಕ್ಕಪಡೆ ಯೋಜನೆ'ಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
4. ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣ:
ಮಾಜಿ ದೇವದಾಸಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪ್ರಸ್ತುತ ಸ್ಥಿತಿಗತಿಯನ್ನು ಅರಿಯಲು ಹಾಗೂ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ಪುನರ್ವಸತಿ ಕಲ್ಪಿಸಲು ಈಗಾಗಲೇ ನಿಖರ ಸಮೀಕ್ಷೆ ಕೈಗೊಳ್ಳಲಾಗಿದೆ.
5. ಉನ್ನತ ಶಿಕ್ಷಣ ಮತ್ತು ಸ್ವಯಂ ಉದ್ಯೋಗಕ್ಕೆ 5 ಕೋಟಿ ರೂ.:
ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ. ಇದರ ಜೊತೆಗೆ ಆ ಕುಟುಂಬದ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ನೆರವು ನೀಡುವ ಹೊಸ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಇದಕ್ಕಾಗಿ 5 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ಒಟ್ಟಾರೆಯಾಗಿ, ಈ ಬಾರಿಯ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣ ಕೇವಲ ಘೋಷಣೆಯಾಗಿರದೆ, ಆರ್ಥಿಕ ನೆರವು (ಗೃಹಲಕ್ಷ್ಮಿ), ಭದ್ರತೆ (ಅಕ್ಕಪಡೆ) ಹಾಗೂ ಅಂಚಿನಲ್ಲಿರುವ ಸಮುದಾಯಗಳ (ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು) ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಒಳಗೊಂಡಿದೆ.
ಇದನ್ನೂ ಓದಿ: 2026-27 ರಲ್ಲಿ 1.32 ಲಕ್ಷ ಕೋಟಿ ರೂ. ಸಾಲ ಪಡೆಯಲು ನಿರ್ಧಾರ- ಒಟ್ಟು ಸಾಲ 8.24 ಲಕ್ಷ ಕೋಟಿ ರೂ.ಗೆ ಏರಿಕೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us