/newsfirstlive-kannada/media/media_files/2025/11/18/rain-forecast-in-south-karnataka-2025-11-18-16-14-25.jpg)
ದಕ್ಷಿಣ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆ ಮುನ್ಸೂಚನೆ
ರಾಜ್ಯದ ದಕ್ಷಿಣ ಕರ್ನಾಟಕ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ರಾಜ್ಯ ಹವಾಮಾನ ಇಲಾಖೆಯಿಂದ ಈ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಸಂಭವಿಸುತ್ತಿದೆ. ಇದರಿಂದ ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮುಂದಿನ 4 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ,ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us