/newsfirstlive-kannada/media/media_files/2025/08/05/bng_fitness_woman-2025-08-05-19-35-51.jpg)
ಬೆಂಗಳೂರು: ಫಿಟ್ನೆಸ್ ಸೆಂಟರ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಒಬ್ಬರು ಅದೇ ಕಟ್ಟಡದಿಂದ ಬಿದ್ದು ಜೀವ ಕಳೆದುಕೊಂಡಿದ್ದು ಈ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಈ ಘಟನೆ ನಡೆದಿದೆ.
ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿ. ಕಡಬಗೆರೆಯಲ್ಲಿರುವ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಯುವತಿ ಕೆಲಸ ಮಾಡುತ್ತಿದ್ದರು. ಕಳೆದ ಎಂಟು ತಿಂಗಳಿನಿಂದ ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದರು. ಆದರೆ ಫಿಟ್ನೆಸ್ ಸೆಂಟರ್‌ನ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಬಿದ್ದು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಇನ್ನು ಯುವತಿ ಜೀವ ಕಳೆದುಕೊಳ್ಳಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಮೂರನೇ ಮಹಡಿಯಿಂದ ಬಿದ್ದಿದ್ದರಿಂದ ಸ್ಥಳದಲ್ಲೇ ಜೀವ ಹೋಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಪೊಲೀಸರ ತನಿಖೆಯಿಂದ ಸತ್ಯ ಏನು ಎಂಬುದು ಗೊತ್ತಾಗಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ