/newsfirstlive-kannada/media/media_files/2025/11/14/salumarda-timmakka-2025-11-14-12-29-04.jpg)
ಅನಾರೋಗ್ಯದಿಂದ ಸಾಲುಮರದ ತಿಮ್ಮಕ್ಕ ವಿಧಿವಶ
ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ಪೆಗೆ ತಿಮ್ಮಕ್ಕ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಬಳಿ ಸಾಲುಮರಗಳನ್ನು ಬೆಳೆಸಿದ್ದರು.
ಸಾಲುಮರದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ರಸ್ತೆ ಬದಿಯಲ್ಲಿ ಕಿಲೋಮೀಟರ್ ಗಟ್ಟಲೇ ಗಿಡಗಳನ್ನು ನೆಟ್ಟಿ ನಿತ್ಯ ನೀರು ಹಾಕಿ ಮರಗಳಾಗುವಂತೆ ಬೆಳೆಸಿದ್ದರು. ಮರಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದರು. ಇದರಿಂದಾಗಿ ತಿಮ್ಮಕ್ಕ ಅವರಿಗೆ ಸಾಲುಮರದ ತಿಮ್ಮಕ್ಕ ಎಂಬ ಅನ್ವರ್ಥನಾಮವೇ ಬಂದಿತ್ತು.
ಸಾಲುಮರದ ತಿಮ್ಮಕ್ಕ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕಾರ ಪಡೆದಾಗ ಆಗಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಆಶೀರ್ವದಿಸಿದ್ದರು.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us