/newsfirstlive-kannada/media/media_files/2025/08/22/sameer_md-2025-08-22-07-28-21.jpg)
ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ನಿರೀಕ್ಷಣಾ ಜಾಮೀನ ಮೇಲೆ ಹೊರಗಿದ್ದಾರೆ. ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಯೂಟ್ಯೂಬರ್ ಸಮೀರ್ ವಿರುದ್ಧ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪೊಲೀಸ್ ಠಾಣೆಯಲ್ಲಿ ಮಂಜು ಜೈನ್ ಎನ್ನುವರು ಪ್ರಕರಣ ದಾಖಲು ಮಾಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಅವರ ಮೇಲೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ಇದನ್ನೂ ಓದಿ: BL ಸಂತೋಷ್ ಎಲ್ಲಿಯೂ ಕೇಸ್ ಹಾಕಿಲ್ಲ.. ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ಏನಂದ್ರು?
/filters:format(webp)/newsfirstlive-kannada/media/media_files/2025/08/22/sameer_against_case-2025-08-22-07-28-37.jpg)
ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ. ಇದರಿಂದ ಸದ್ಯಕ್ಕೆ ಯೂಟ್ಯೂಬರ್ ಸಮೀರ್ ಎಂ.ಡಿ ಬಂಧನವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲು ಧರ್ಮಸ್ಥಳ ಠಾಣೆ ಪೊಲೀಸರು ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಮನೆಯಲ್ಲಿ ಸಮೀರ್ ಇರಲಿಲ್ಲ. ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಸಮಯದಲ್ಲಿ ಈ ಬೆಣವಣಿಗೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us