/newsfirstlive-kannada/media/media_files/2025/09/20/satish_jarkiholi-2025-09-20-10-26-59.jpg)
ಬೆಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು 2028ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನಲೆ ಜರ್ಮನಿಯ ಅಗಸ್ಟಾ ಕಂಪನಿಯಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ.
ಸತೀಶ್ ಜಾರಕಿಹೊಳಿ ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಮಾರಾಟ ಮಾಡಿ, ಅತ್ಯಾಧುನಿಕ ಡಬಲ್ ಎಂಜಿನ್ ಹೊಂದಿರುವ ಹೆಲಿಕಾಪ್ಟರ್ ಖರೀದಿಸಿದ್ದಾರೆ. ತಮ್ಮ ಹೊಸ ಹೆಲಿಕಾಪ್ಟರ್​ನಲ್ಲಿ ಆಧುನಿಕ ಸುರಕ್ಷಾ ವ್ಯವಸ್ಥೆಯನ್ನು ಹೊಂದಿದ್ದು, ಐವರು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳು ಪ್ರಯಾಣಿಸಲು ಚಾಪರ್ ಸೀಟ್ ಸೌಲಭ್ಯವನ್ನು ಹೊಂದಿದೆ.
ಇದಲ್ಲದೆ, ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನೂ ಹೊಂದಿದೆ. ಈಗಾಗಲೇ ಉತ್ತರ ಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಸಾಹುಕಾರ್ ಸತೀಶ್ ಜಾರಕಿಹೊಳಿ, ಈಗ ಆಧುನಿಕ ಹೆಲಿಕಾಪ್ಟರ್ ಖರೀದಿಸಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.