Golden Book of World Records; ಶಕ್ತಿ ಯೋಜನೆ ಇತಿಹಾಸ.. ಸಿಎಂ ಸಿದ್ದರಾಮಯ್ಯ ಫುಲ್ ಹ್ಯಾಪಿ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿ ಮಾಡಿತ್ತು. ಈ ಯೋಜನೆ ಮೂಲಕ ರಾಜ್ಯದಲ್ಲಿ ಇರುವಂತಹ ಎಲ್ಲ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

author-image
Bhimappa
CM_SIDDARAMAIAH (3)
Advertisment

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಆದ ಶಕ್ತಿ ಯೋಜನೆಯು ಗೋಲ್ಡನ್​ ಬುಕ್​ ಆಫ್​ ವರ್ಲ್ಡ್​ ರೆಕಾರ್ಡ್ಸ್​​ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ. ಇದು ಇಡೀ ಕರ್ನಾಟಕವೇ ಹೆಮ್ಮೆ ಪಡುವಂತ ಸಂಗತಿಯಾದರೆ, ಕಾಂಗ್ರೆಸ್​ ಸರ್ಕಾರಕ್ಕೆ ಅವಿಸ್ಮರಣೀಯ ಕ್ಷಣ ಎಂದು ಬಣ್ಣಿಸಬಹುದು. 

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿ ಮಾಡಿತ್ತು. ಈ ಯೋಜನೆ ಮೂಲಕ ರಾಜ್ಯದಲ್ಲಿ ಇರುವಂತಹ ಎಲ್ಲ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಮಹಿಳೆಯರು ದಾಖಲೆ ಮಟ್ಟದಲ್ಲಿ ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. 

ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ. ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ Golden Book of World Records ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ. ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಪ್ರಾರಂಭದ ದಿನದಿಂದ ಅಂದರೆ 2023 ಜೂನ್ 11 ರಿಂದ 2025ರ ಜುಲೈ 25 ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ:ವಿಲ್ಸನ್ ಗಾರ್ಡನ್ ಸ್ಫೋಟ ಪ್ರಕರಣ; ಮಗಳು ಜೀವ ಬಿಟ್ಟ ಕೆಲವೇ ನಿಮಿಷಗಳಲ್ಲಿ ಉಸಿರು ಚೆಲ್ಲಿದ ತಾಯಿ

ಫ್ರೀ ಬಸ್ ವ್ಯವಸ್ಥೆ​​​​ ಇದ್ರೂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಮಹಿಳೆಯರು.. ಕಾರಣವೇನು..?

ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ - ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಜ್ಯದ ತಲಾದಾಯ ದೇಶದಲ್ಲೇ ನಂ.01 ಸ್ಥಾನದಲ್ಲಿದೆ ಎಂದಿದ್ದಾರೆ. 

ಶಕ್ತಿ ಯೋಜನೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನಮ್ಮ ನಂಬಿಕೆ ಹುಸಿಯಾಗಲಿಲ್ಲ. ಯೋಜನೆಯನ್ನು ಜಾರಿಗೆ ಕೊಟ್ಟ ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CM SIDDARAMAIAH DK Shivakumar Dr G Parameshwar Shakti scheme
Advertisment