/newsfirstlive-kannada/media/media_files/2026/01/18/shimogga-bhadra-2026-01-18-18-23-13.jpg)
ಶಿವಮೊಗ್ಗ: ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ಘೋರ ದುರಂತ ನಡೆದಿದೆ. ಒಂದೇ ಕುಟುಂಬದ ನಾಲ್ವರು ಭದ್ರಾ ನಾಲೆಯ ನೀರು ಪಾಲಾಗಿದ್ದಾರೆ.
ಕುಟುಂಬದ ಸದಸ್ಯರು ಬಟ್ಟೆ ತೊಳೆಯಲು ಹೋದಾಗ ದುರ್ಘಟನೆ ನಡೆದಿದೆ. ನೀಲಾ ಬಾಯಿ (50), ಮಗ ರವಿಕುಮಾರ್ (23), ಮಗಳು ಶ್ವೇತಾ (24) ಮತ್ತು ಅಳಿಯ ಪರಶುರಾಮ (28) ಸೇರಿ ನಾಲ್ವರು ನೀರು ಪಾಲಾಗಿದ್ದಾರೆ.
ಒಬ್ಬರು ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆ. ಒಬ್ಬರನ್ನು ಬಚಾವ್ ಮಾಡಲು ಹೋಗಿ ಮತ್ತೊಬ್ಬರು ನೀರು ಪಾಲು ಆಗಿರುವ ಸಾಧ್ಯತೆ ಇದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಳೆಹೊನ್ನೂರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸ್ತಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್​ ಮನೆ ಎದುರು ಗಿಲ್ಲಿ ಅಭಿಮಾನಿಗಳ ಮೇಲೆ ಲಘು ಲಾಠಿ ಪ್ರಹಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us