/newsfirstlive-kannada/media/media_files/2026/01/24/bsnl-2026-01-24-16-42-32.jpg)
ಶಿವಮೊಗ್ಗ: ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ರೆಡ್​​ ಆರ್ಮಿ ಮೇಲೆ ಕೋಟಿ ಕುಳಗಳ ಕಣ್ಣು.. RCB ಖರೀದಿಗೆ ಮುಂದೆ ಬಂದವ್ರು ಎಷ್ಟೊಂದು ಜನ?
/filters:format(webp)/newsfirstlive-kannada/media/media_files/2026/01/24/bsnl-3-2026-01-24-16-43-28.jpg)
ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದು, ಬಿಎಸ್‌ಎನ್‌ಎಲ್ ಪ್ರತಿಕೃತಿಯ ಮೇಲೆ ‘ಬಿಎಸ್‌ಎನ್‌ಎಲ್‌ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂಬ ಪ್ಲೆಕ್ಸ್ ಅಳವಡಿಸಿದ್ದಾರೆ.
/filters:format(webp)/newsfirstlive-kannada/media/media_files/2026/01/24/bsnl-1-2026-01-24-16-43-42.jpg)
ಹೊಂಬುಜ ಮಠಕ್ಕೆ ತೆರಳುವ ರಸ್ತೆಯಲ್ಲಿ ಈ ಪ್ಲೆಕ್ಸ್ ಅನ್ನು ಅಳವಡಿಸಿದ್ದಾರೆ. ನೆಟ್‌ವರ್ಕ್ ಸಂಪೂರ್ಣ ಸ್ಥಗಿತಗೊಂಡಂತೆಯೇ ಇರುವ ಪರಿಸ್ಥಿತಿಯಿಂದ ದಿನನಿತ್ಯದ ಕೆಲಸಗಳು, ಆನ್‌ಲೈನ್ ಸೇವೆಗಳು, ವಿದ್ಯಾರ್ಥಿಗಳ ಅಧ್ಯಯನ ಹಾಗೂ ರೈತರ ಸಂಪರ್ಕ ವ್ಯವಸ್ಥೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: 80,000 ರೂ ಮೌಲ್ಯದ ಗಿಳಿ ಮನೆಬಿಟ್ಟು ಹೋಯಿತು.. ಕಣ್ಣೀರು ಹಾಕುತ್ತ ಠಾಣೆಗೆ ಬಂದ ಯಜಮಾನ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us