Advertisment

ಹಾಸ್ಟೆಲ್​​ನ ಟೆರಸ್​​ನಲ್ಲಿ ಜೀವಬಿಟ್ಟ ವಿದ್ಯಾರ್ಥಿನಿ, ಅಸಲಿಗೆ ಆಗಿದ್ದೇನು?

ನಗರದ ಕೋಟೆ ರಸ್ತೆ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

author-image
Ganesh Kerekuli
shimogga student tc vanisha
Advertisment

ಶಿವಮೊಗ್ಗ: ನಗರದ ಕೋಟೆ ರಸ್ತೆ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. 

Advertisment

ಟಿ.ಸಿ.ವನೀಷಾ (21) ಮೃತ ವಿದ್ಯಾರ್ಥಿನಿ. ವನೀಷಾ ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ನಿವಾಸಿಯಾಗಿದ್ದಳು. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಎಸ್​ಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ 10.15ರ ಸುಮಾರಿಗೆ ಹಾಸ್ಟೆಲ್​ನ ಟೆರಸ್​​ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಬೆಳಗ್ಗೆಯ ತಿಂಡಿ ಸೇವಿಸಿದ ನಂತರ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್​ನ ಇತರೆ ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. 

ಇದನ್ನೂ ಓದಿ: WPL ರಿಟೈನ್ಶನ್​ಗೆ ಇವತ್ತೇ ಕೊನೆ ದಿನ.. RCB ಶ್ರೇಯಾಂಕರ ಉಳಿಸಿಕೊಳ್ಳೋದು ಡೌಟ್​..!

Advertisment

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Shimogga news
Advertisment
Advertisment
Advertisment