/newsfirstlive-kannada/media/media_files/2026/01/28/shimogga-bus-2026-01-28-07-15-11.jpg)
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸುಟ್ಟು ಕರಕಲಾದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದ್ದು, ಘಟನೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ.
ಘಟನೆಯ ವಿವರ:
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಭಾಗದ ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಈ ಅವಘಡ ಸಂಭವಿಸಿದೆ. 'ಶ್ರೀ ಅನ್ನಪೂರ್ಣೇಶ್ವರಿ' ಎಂಬ ಹೆಸರಿನ ಖಾಸಗಿ ಸ್ಲೀಪರ್ ಬಸ್ ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ.
ಚಾಲಕನ ಸಮಯಪ್ರಜ್ಞೆ:
ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಗಾಬರಿಗೊಂಡ ಚಾಲಕ, ತಕ್ಷಣವೇ ಬಸ್ಸನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಕೂಡಲೇ ರಸ್ತೆ ಪಕ್ಕದ ಮರಕ್ಕೆ ಬಸ್ಸನ್ನು ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೂಡಲೇ ಕೆಳಗಿಳಿಯಲು ಸಾಧ್ಯವಾಯಿತು. ಬಸ್ಸಿನಲ್ಲಿ ಚಾಲಕ ಸೇರಿದಂತೆ ಒಟ್ಟು 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಬೆಂಕಿ ಕಾಣಿಸಿಕೊಂಡ ರಭಸಕ್ಕೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಎಂಟು ಜನ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳ, ಅಂಬುಲೆನ್ಸ್ ಹಾಗೂ ಪೊಲೀಸರು ಧಾವಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರೂ, ಅಷ್ಟರಲ್ಲಾಗಲೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಕಾಲೇಜುಗಳಲ್ಲಿ ಜಾತಿ ನಿಂದನೆಗೆ ಯುಜಿಸಿ ಕಡಿವಾಣ : ಹೊಸ ನಿಯಮಕ್ಕೆ ಪ್ರಬಲ ಜಾತಿಗಳ ತೀವ್ರ ವಿರೋಧ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us