/newsfirstlive-kannada/media/media_files/2025/09/09/bk-sangamesh-2025-09-09-10-39-43.jpg)
ಶಿವಮೊಗ್ಗ: ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕೆಂಬ ಆಸೆಯನ್ನ ಭದ್ರಾವತಿ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ವ್ಯಕ್ತಪಡಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿರುವ ಸಂಗಮೇಶ್.. ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತನ್ನಾಡುತ್ತಿದ್ದೇನೆ ಅಂದರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು. ಮುಂದಿನ ದಿನಗಳಲ್ಲಿ ಪುತ್ರ ಗಣೇಶನ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಮನವಿ ಮಾಡಿಕೊಂಡರು.
ಇದನ್ನೂ ಓದಿ:ಕರ್ನಾಟಕಕ್ಕೆ ಜಾಕ್ಪಾಟ್! ಈ ಜಿಲ್ಲೆಯಲ್ಲಿ ಟನ್ ಗಟ್ಟಲೇ ಚಿನ್ನದ ನಿಕ್ಷೇಪ ಪತ್ತೆ..!
ನಂತರ ಮಾತು ಮುಂದುವರಿಸಿದ ಅವರು.. ನಿಮ್ಮ ಮನೆಯ ಮಗನಾಗಿ ಕೊನೆಯವರೆಗೂ ಇರುತ್ತೇನೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ, ಮುಸ್ಲಿಂ ಆಗಿ ಹುಟ್ಟಬೇಕು ಅಂತಾ ಬಯಸ್ತೀನಿ. ಈ ಕಾರ್ಯಕ್ರಮಕ್ಕೆ ಬಹಳ ಪ್ರೀತಿಯಿಂದ ಕರೆಸಿದ ಎಲ್ಲರಿಗೂ ಧನ್ಯವಾದಗಳು ಎಂದರು.
ಮೆರವಣಿಗೆಯಲ್ಲಿ ಪಾಕ್ ಘೋಷಣೆ..
ಇನ್ನು, ಇದೇ ಭದ್ರವಾತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುತ್ತಿರುವ ವಿಡಿಯೊ ಒಂದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಇದಾಗಿದೆ.
ಕಳೆದ ರಾತ್ರಿ 8:00 ಗಂಟೆಗೆ ಈದ್ ಮಿಲಾದ್ ಮೆರವಣಿಗೆ ನಡೆದಿದೆ. ಅದಕ್ಕಾಗಿ ಗಾಂಧಿ ವೃತ್ತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವಾಗ ಕೆಲ ಕಿಡಿಗೇಡಿಗಳು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.
ಇದನ್ನೂ ಓದಿ:ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ