/newsfirstlive-kannada/media/media_files/2025/09/09/bhadravati-pak-2025-09-09-10-16-09.jpg)
ಸೋಶಿಯಲ್ ಮೀಡಿಯಾದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ (Pakistan Zindabad slogan) ಎಂದು ಕೂಗುತ್ತಿರುವ ವಿಡಿಯೊ ಒಂದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಇದಾಗಿದೆ.
ಕಳೆದ ರಾತ್ರಿ 8:00 ಗಂಟೆಗೆ ಈದ್ ಮಿಲಾದ್ ಮೆರವಣಿಗೆ ನಡೆದಿದೆ. ಅದಕ್ಕಾಗಿ ಗಾಂಧಿ ವೃತ್ತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವಾಗ ಕೆಲ ಕಿಡಿಗೇಡಿಗಳು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
12 ಸೆಕೆಂಡ್ ಇರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸ್ ಅಧಿಕಾರಿಗಳಿಂದ ಇನ್ನಷ್ಟೇ ಮಾಹಿತಿ ಬರಬೇಕಿದೆ.
ಇದನ್ನೂ ಓದಿ:5ನೇ ತರಗತಿ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 1ನೇ ತರಗತಿ ವಿದ್ಯಾರ್ಥಿ..!