/newsfirstlive-kannada/media/media_files/2026/03/09/journalist-anil-kuamr-naik-died-in-accident-2026-03-09-14-02-12.jpg)
ಪತ್ರಕರ್ತ ಅನಿಲ್ ಕುಮಾರ್ ನಾಯ್ಕ್ ಆಕ್ಸಿಡೆಂಟ್ ನಲ್ಲಿ ಸಾವು
ಬೈಕ್ ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಖಾಸಗಿ ಸುದ್ದಿವಾಹಿನಿಯ ವರದಿಗಾರ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಶುಭಮಂಗಳ ಆಟೋ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದ್ದು, 44 ವರ್ಷದ ವರದಿಗಾರ ಅನಿಲ್ ಕುಮಾರ್​ ನಾಯ್ಕ್ ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಮನೆಗೆ ತೆರಳುವ ವೇಳೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮದಿಂದ, ಅನಿಲ್ ಕುಮಾರ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅನಿಲ್ ಕುಮಾರ್ ನಾಯ್ಕ್ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಚಿಕಿತ್ಸೆ ಫಲಕಾರಿಯಾಗದೇ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೂವರು ಮಕ್ಕಳು ಹಾಗೂ ಪತ್ನಿ ಸೇರಿದಂತೆ ಅಪಾರ ಮಿತ್ರರನ್ನು ಬಿಟ್ಟು ಅಗಲಿದ್ದಾರೆ. ಅನಿಲ್ ಕುಮಾರ್ ನಾಯ್ಕ್ ಅಕಾಲಿಕ ನಿಧನಕ್ಕೆ ಪತ್ರಕರ್ತ ಮಿತ್ರರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us