/newsfirstlive-kannada/media/media_files/2026/01/21/shimogga-doctor-case-2026-01-21-13-26-38.jpg)
ಶಿವಮೊಗ್ಗ: ಭದ್ರಾವತಿ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ವೃದ್ಧ ದಂಪತಿಯ ನಿಗೂಢ ಸಾ*ನ ಪ್ರಕರಣವನ್ನು ಓಲ್ಡ್ ಟೌನ್ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಚಿನ್ನಾಭರಣಕ್ಕಾಗಿ ನಡೆದ ಈ ಭೀಕರ ಕೃತ್ಯದಲ್ಲಿ ಮೃತರ ಸ್ವಂತ ಸಂಬಂಧಿಯೇ ಆಗಿರುವ ವೈದ್ಯನೊಬ್ಬ ಪ್ರಕರಣದಲ್ಲಿರೋದು ಜಿಲ್ಲೆಯನ್ನ ಬೆಚ್ಚಿಬೀಳಿಸಿದೆ.
ಏನಿದು ಪ್ರಕರಣ?
ಭದ್ರಾವತಿಯಲ್ಲಿ ವೃದ್ಧ ದಂಪತಿ ಚಂದ್ರಪ್ಪ ಮತ್ತು ಅವರ ಪತ್ನಿ ನಿಗೂಢವಾಗಿ ಮೃತಪಟ್ಟಿದ್ದರು. ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಆದರೆ, ದಂಪತಿಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿರಲಿಲ್ಲ. ಇದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಮೇಲ್ನೋಟಕ್ಕೆ ಇದು ಸಹಜ ಸಾವು ಎಂಬಂತೆ ಕಂಡರೂ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು.
ವೈದ್ಯನಿಂದಲೇ ನಡೆಯಿತು ಸ್ಕೆಚ್?
ಈ ಜೋಡಿ ಕೊಲೆಯ ಆರೋಪಿ ಬೇರೆ ಯಾರೂ ಅಲ್ಲ, ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್. ಆರೋಪಿ ಡಾ. ಮಲ್ಲೇಶ್ ಬಿ. ಬೀರನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ವೈದ್ಯನಾಗಿದ್ದಾನೆ. ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊ* ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೆ ಡಬಲ್ ಡೆಕ್ಕರ್ ಬಸ್ ಸೇವೆ ಶುರು: ಪ್ರವಾಸಿಗರಿಗೆ ಪ್ರವಾಸಿ ತಾಣ ವೀಕ್ಷಣೆಗೆ ಬಸ್ ಸೌಲಭ್ಯ
/filters:format(webp)/newsfirstlive-kannada/media/media_files/2026/01/21/shimogga-doctor-case-1-2026-01-21-13-27-59.jpg)
ಮರಣೋತ್ತರ ಪರೀಕ್ಷೆ ವರದಿ
ಮೃತದೇಹಗಳ ಮರಣೋತ್ತರ ಪರೀಕ್ಷೆಯು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಂದು ಮುಕ್ತಾಯಗೊಂಡಿದೆ. ಯಾವುದೇ ಬಾಹ್ಯ ಗಾಯಗಳಿಲ್ಲದೆ ಕೊಲೆ ಮಾಡಿರುವುದು ವೈದ್ಯಕೀಯ ತಪಾಸಣೆಯ ವೇಳೆ ದೃಢಪಟ್ಟಿದೆ ಎನ್ನಲಾಗಿದೆ.
ಪೊಲೀಸ್ ಕಾರ್ಯಾಚರಣೆ
ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಇದನ್ನೂ ಓದಿ:ಪತ್ನಿಯ ಜೀವ ತೆಗೆದು ಹೃದಯಾಘಾತ ಅಂತಾ ಬಿಂಬಿಸಿದ.. ಈಗ ಏನಾಯ್ತು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us