/newsfirstlive-kannada/media/post_attachments/wp-content/uploads/2025/04/Siddaramaiah-Cabinet-Meet-3.jpg)
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಮತಗಳ್ಳತನ ಆರೋಪ ಮಾಡಿದ್ದರು, ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್ ಪೇಪರ್ಗೆ ಆದ್ಯತೆ ನೀಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಮುಂದಾಗಿದೆ.
ಕಾನೂನು ಸಚಿವ HK ಪಾಟೀಲ್ ಮಾಹಿತಿ..!
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಹಾಗೂ ಅಗತ್ಯ ಕಾನೂನು ತಿದ್ದುಪಡಿ ತರಲು, ನಿಯಮಾವಳಿ ರಚನೆ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯ ಕಾನೂನು ತಿದ್ದುಪಡಿ ಮಾಡಬೇಕು. ನಿಯಮಾವಳಿಗಳಿಗೂ ಕೆಲವು ತಿದ್ದುಪಡಿ ಮಾಡಬೇಕಾಗುತ್ತದೆ. ಅಗತ್ಯ ಕಾನೂನು ಮಾಡಲು ಕ್ಯಾಬಿನೆಟ್ ಶಿಫಾರಸು ಮಾಡಿದೆ. ಮೊದಲ ಹಂತದಲ್ಲಿ ಮತಯಂತ್ರದ ಬದಲು ಮತಪತ್ರ ತರುವಂತೆ ಚುನಾವಣಾ ಆಯೋಗಕ್ಕೆ ಸರ್ಕಾರದ ಶಿಫಾರಸು ಮಾಡಿದೆ ಎಂದು ಸಚಿವ ಹೆಚ್. ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಹೃದಯ ಕಾಯಿಲೆಗಳ ಪತ್ತೆ ಹಚ್ಚುವ ಕ್ಯಾತ್ ಲ್ಯಾಬ್ ಆರಂಭಕ್ಕೆ ಆರೋಗ್ಯ ಇಲಾಖೆ ಪ್ಲ್ಯಾನ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ