/newsfirstlive-kannada/media/media_files/2026/03/06/silk-park-1-2026-03-06-12-05-04.jpg)
* ಭಾರತದ ರೇಷ್ಮೆ ಉತ್ಪಾದನೆಯಲ್ಲಿ ಶೇ.46 ರಷ್ಟು ಪಾಲು ಹೊಂದಿರುವ ಕರ್ನಾಟಕವು ದೇಶದ ರೇಷ್ಮೆ ರಾಜಧಾನಿಯಾಗಿದೆ. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ರೀಲಿಂಗ್ ಶೆಡ್ ನಿರ್ಮಾಣ, ಹನಿ ನೀರಾವರಿ ಘಟಕ ಮುಂತಾದ ಚಟುವಟಿಕೆಗಳಿಗೆ ಕಳೆದ ಮೂರು ವರ್ಷಗಳಲ್ಲಿ 531 ಕೋಟಿ ರೂ. ಮೊತ್ತದ ಸಹಾಯಧನವನ್ನು 2 ಲಕ್ಷ ಫಲಾನುಭವಿಗಳಿಗೆ ಒದಗಿಸಲಾಗಿದೆ
* ಪ್ರಮುಖ 15 ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಸಂಪೂರ್ಣ ನಗದುರಹಿತ, ಡಿಜಿಟಲ್ ವಹಿವಾಟು, ಇ-ಹರಾಜು, ಇ-ಪೇಮೆಂಟ್ ಮತ್ತು ಇ-ಪಾವತಿ ವ್ಯವಸ್ಥೆಯನ್ನು ಆರಂಭಿಸಿದ ದೇಶದ ಮೊದಲ ಮತ್ತು ಏಕೈಕ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.
* ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚವನ್ನು 20 ರೂ. ಗೆ ಹೆಚ್ಚಿಸಲಾಗುವುದು.
* ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆಗೆ ಕ್ರಮವಹಿಸಲಾಗುವುದು.
* ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
/filters:format(webp)/newsfirstlive-kannada/media/media_files/2026/03/06/silk-park-2026-03-06-12-06-35.jpg)
ಪಶು ಸಂಗೋಪನೆ
* ನಮ್ಮ ಸರ್ಕಾರದ ಪ್ರಾರಂಭದ ಅವಧಿಯಲ್ಲಿ ಪ್ರತಿದಿನ 8.75 ಲಕ್ಷ ಹಾಲು ಉತ್ಪಾದಕರಿಂದ 81.78 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿತ್ತು. ಪ್ರಸ್ತುತ ಪ್ರತಿದಿನ 9.07 ಲಕ್ಷ ಹಾಲು ಉತ್ಪಾದಕರಿಂದ ಸರಾಸರಿ ಒಂದು ಕೋಟಿ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಹಾಲು ಪೂರೈಕೆದಾರರಿಗೆ ಬಾಕಿ ಇದ್ದ 609 ಕೋಟಿ ರೂ. ಪ್ರೋತ್ಸಾಹಧನವನ್ನು ಒಳಗೊಂಡಂತೆ, ಇದುವರೆಗೂ ಒಟ್ಟಾರೆ 4,523 ಕೋಟಿ ರೂ. ಪ್ರೋತ್ಸಾಹಧನವನ್ನು ನೀಡಲಾಗಿದೆ.
* ಅನುಗ್ರಹ ಯೋಜನೆಯಡಿ ಕುರಿ/ಮೇಕೆಗಳ ಮತ್ತು ರಾಸುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಧನವನ್ನು ಹೆಚ್ಚಿಸಿ, ಇದುವರೆಗೂ 1.70 ಲಕ್ಷ ಫಲಾನುಭವಿಗಳಿಗೆ 101 ಕೋಟಿ ರೂ. ವಿತರಿಸಲಾಗಿದೆ.
* ʻಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ಅಧಿನಿಯಮ, 2025ʼ ನ್ನು ಜಾರಿಗೆ ತರಲಾಗಿದೆ. ಇಲ್ಲಿಯವರೆಗೆ 6,702 ಕುರಿಗಾಹಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ.
* ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 300 ಪಶುವೈದ್ಯ ಸಂಸ್ಥೆಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ. 2026-27ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದೊಂದಿಗೆ ಹೊಸದಾಗಿ 100 ಕಟ್ಟಡಗಳನ್ನು ನಿರ್ಮಿಸಲಾಗುವುದು.
* ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25 ರಷ್ಟು ಸಹಾಯಧನದಲ್ಲಿ ಕುರಿ/ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆಯನ್ನು ರೂಪಿಸಲಾಗಿದೆ. ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25 ರಷ್ಟು ಸಹಾಯಧನದಲ್ಲಿ ಹಸು/ಎಮ್ಮೆ ಖರೀದಿಸಲು ಪ್ರೋತ್ಸಾಹಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗಳಿಗೆ ಒಟ್ಟು 40 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗುವುದು.
* ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ವಿಶೇಷ ಸೇವೆ ವ್ಯವಸ್ಥೆಯನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 15 ತಾಲ್ಲೂಕು ಪಶು ಆಸ್ಪತ್ರೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
* ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು.
* ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʻವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʻಫಲಧಾರೆʼ ಶಿಬಿರಗಳನ್ನು ಐದು ಕೋಟಿ ರೂ. ವೆಚ್ಚದಲ್ಲಿ ಏರ್ಪಡಿಸಲಾಗುವುದು.
*ಪಶುಗಳಲ್ಲಿನ ರೋಗಗಳನ್ನು ನಿಖರವಾಗಿ ಪತ್ತೆ ಹಚ್ಚಲು ರಾಜ್ಯದಲ್ಲಿ ಪ್ರಪ್ರಥಮವಾಗಿ ಬೆಂಗಳೂರು ಹಾಗೂ ಬೀದರ್ನ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರುಗಳ ಸಿ.ಟಿ. ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
* ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರೋಪಾಯವಾಗಿ ಸಂತಾನಹರಣ ನಿಯಂತ್ರಣವನ್ನು ವೈಜ್ಞಾನಿಕ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ಉದ್ದೇಶದಿಂದ ಪಶುವೈದ್ಯರು ಮತ್ತು ಪಶುವೈದ್ಯಕೀಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿಯನ್ನು ನೀಡಲು ಬೆಂಗಳೂರು ಹಾಗೂ ಬೀದರ್ ನಲ್ಲಿ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼವನ್ನು ಸ್ಥಾಪಿಸಲಾಗುವುದು.
/filters:format(webp)/newsfirstlive-kannada/media/media_files/2026/03/06/stray-dogs-2026-03-06-12-07-54.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us