ಮೆಕ್ಕೆಜೋಳ ಬೆಳೆಗಾರರಿಗೆ ಗುಡ್​ನ್ಯೂಸ್ ನೀಡಿದ ರಾಜ್ಯ ಸರ್ಕಾರ

ಮೆಕ್ಕೆಜೋಳ ಬೆಳೆಗಾರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ನೀಡಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳಕ್ಕೆ 'ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ'ಯಡಿ ಬೆಲೆ ವ್ಯತ್ಯಾಸದ ಮೊತ್ತ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

author-image
Ganesh Kerekuli
Siddaramaiah (8)
Advertisment

ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ನೀಡಿದೆ. 

ಬೆಲೆ ವ್ಯತ್ಯಾಸ ಪಾವತಿ ಯೋಜನೆ ಜಾರಿ

2025-26ನೇ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳಕ್ಕೆ 'ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ'ಯಡಿ ಬೆಲೆ ವ್ಯತ್ಯಾಸದ ಮೊತ್ತ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

​ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂಪಾಯಿ ಸಹಾಯಧನ

ಮಾರುಕಟ್ಟೆ ದರ 1,900 ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಇದ್ದಲ್ಲಿ, ರೈತರಿಗೆ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂಪಾಯಿವರೆಗೆ ವ್ಯತ್ಯಾಸದ ಮೊತ್ತ ಸಿಗಲಿದೆ. 

ಮಾರುಕಟ್ಟೆ ಮಧ್ಯಪ್ರವೇಶ ದರ (MIP) ನಿಗದಿ:  

ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 2,150 ರೂ. ಮಾರುಕಟ್ಟೆ ಮಧ್ಯಪ್ರವೇಶ ದರವನ್ನು ನಿಗದಿಪಡಿಸಲಾಗಿದೆ. ​ಒಬ್ಬ ರೈತರಿಗೆ 50 ಕ್ವಿಂಟಾಲ್ ಮಿತಿ: ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ, ಒಬ್ಬ ರೈತರಿಂದ ಗರಿಷ್ಠ 50 ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ.  

ನೇರ ನಗದು ವರ್ಗಾವಣೆ (DBT):

ವ್ಯತ್ಯಾಸದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗುವುದು.  

ಒಂದು ತಿಂಗಳ ಕಾಲಾವಕಾಶ:

ಯುಎಮ್‌ಪಿ (UMP) ತಂತ್ರಾಂಶದಲ್ಲಿ ವಹಿವಾಟು ಆರಂಭವಾದ ದಿನಾಂಕದಿಂದ ಕೇವಲ ಒಂದು ತಿಂಗಳು ಮಾತ್ರ ಈ ಯೋಜನೆ ಜಾರಿಯಲ್ಲಿರುತ್ತದೆ.  

ನೋಂದಣಿ ಕಡ್ಡಾಯ: 

ರೈತರು ತಮ್ಮ ಹೆಸರನ್ನು ಬಯೋಮೆಟ್ರಿಕ್ ಮೂಲಕ NeML ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.  

​11 ಜಿಲ್ಲೆಗಳಿಗೆ ಮೊದಲ ಆದ್ಯತೆ:

ಹಾವೇರಿ, ವಿಜಯನಗರ, ಗದಗ, ಬೆಳಗಾವಿ, ಕೊಪ್ಪಳ ಸೇರಿದಂತೆ ಪ್ರಮುಖ 11 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲಾಗುತ್ತಿದೆ.  

ಇದನ್ನೂ ಓದಿ: ರೆಹಮಾನ್‌ ವಿವಾದ ಬೆನ್ನಲ್ಲೇ ‘ಭಾರತಕ್ಕೆ ಟಿ-20 ವಿಶ್ವಕಪ್ ಆಡಲು ಬರಲ್ಲ’ ಎಂದ ಬಾಂಗ್ಲಾದೇಶ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Karnataka Govt CM SIDDARAMAIAH maize farmers
Advertisment