ಸೈಕ್ಲೋನ್ ಎಫೆಕ್ಟ್; ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆರ್ಭಟ ಸಾಧ್ಯತೆ!

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ..

author-image
Ganesh Kerekuli
ಇಂದಿನಿಂದ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ
Advertisment

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇವತ್ತು, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿನ ತೀರದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್​ ವೇಗದಲ್ಲಿ ಬೀಸುವ ಸಾಧ್ಯತೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಸೂಚಿಸಿದೆ. 

ಇತ್ತ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ,ಮೈಸೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು ಮತ್ತು ನಾಳೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

BNG_RAINS

ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗ್ತಿದೆ. ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ಚೆನ್ನೈ, ಪುದುಚೇರಿ ಹಾಗೂ ಆಂಧ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಸೇಲಂ ಜಿಲ್ಲೆಯ ಹಲವೆಡೆ ಎಡಬಿಡದೇ ಮಳೆಯಾಗಿದ್ದು ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿದೆ. ಮತ್ತೊಂದೆಡೆ ಧರ್ಮಪುರಿ ಜಿಲ್ಲೆಯಲ್ಲೂ ಭಾರಿ ಮಳೆಯಾಗ್ತಿದ್ದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ಇನ್ನು ಪಕ್ಕದ ಪುದುಚೇರಿಯ ಪೆರಿಯಕಲಪೇಟೆಯಲ್ಲಿ 25 ಸೆಂ.ಮೀ ಮಳೆಯಾಗಿದೆ ಜನರು ತತ್ತರಿಸಿ ಹೋಗಿದ್ದಾರೆ. ಪುದುಚೇರಿ, ವಿಲ್ಲುಪುರಂ ಹಾಗೂ ಕಡಲೂರು ಸೇರಿದಂತೆ 23 ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಆಂಧ್ರಪ್ರದೇಶದ ನೆಲ್ಲೂರು, ರಾಯಲಸೀಮಾ, ವಿಜಯವಾಡ, ಕಡಪ ಜಿಲ್ಲೆಗಳಲ್ಲೂ ಮಳೆಯಾಗ್ತಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪಕ್ಕದ ರಾಜ್ಯ ತೆಲಂಗಾಣದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜನರು ಎಚ್ಚರ ವಹಿಸುವಂತೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ:BBK12; ಫಿಸಿಕಲ್ ಟಾಸ್ಕ್​ನಿಂದ ರಂಗೇರಿದ ದೊಡ್ಮನೆ.. ರಘು ಆಟದಿಂದ ಉಳಿದ ಕಂಟೆಸ್ಟೆಂಟ್ಸ್​ ಫುಲ್​ ಶಾಕ್​!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Heavy Rain Bengaluru rain News
Advertisment