/newsfirstlive-kannada/media/media_files/2025/08/05/bus-band-koppal-2025-08-05-08-10-47.jpg)
ಕೊಪ್ಪಳ: ವೇತನ ಪರಿಷ್ಕರಣೆ ಹಾಗೂ 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ 4 ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದೆ. ಇದರ ಮಧ್ಯೆ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ; ಈ ಕುರಿತು ಸಭೆ ಬಳಿಕ ಸಚಿವ ರಾಮಲಿಂಗಾರೆಡ್ಡಿ ಏನೇನು ಹೇಳಿದರು?
ಜಿಲ್ಲೆಯ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ಎಸೆದಿದ್ದಾರೆ. ಕಲ್ಲು ತೂರಿದ ಪರಿಣಾಮ ಬಸ್ ಗ್ಲಾಸ್ ಡ್ಯಾಮೇಜ್ ಆಗಿದೆ.
ಸಾರಿಗೆ ನೌಕರರ ಬೇಡಿಕೆಗಳೇನು?
01-01-2024ರಿಂದ ನೌಕರರ ವೇತನ ಪರಿಷ್ಕರಣೆ ಆಗಬೇಕು
ನೌಕರರ 38 ತಿಂಗಳ ಹಿಂಬಾಕಿಯನ್ನು ಪಾವತಿ ಮಾಡಬೇಕು
ಸಾರಿಗೆ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಬೇಕು
ಸಾರಿಗೆ ನೌಕರರಿಗೆ ಪ್ರತಿ 4 ವರ್ಷಕೊಮ್ಮೆ ವೇತನ ಪರಿಷ್ಕರಣೆ
ಇನ್ನು ಮುಂದೆ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು
ಈ ಹಿಂದೆ ಮುಷ್ಕರದಲ್ಲಿ ಭಾಗಿಯಾದ ನೌಕರರ ವಜಾ ವಾಪಾಸ್
ನೌಕರರ ಕುಟುಂಬಸ್ಥರ ಮೇಲಿನ ಸುಳ್ಳು ಕೇಸ್ ವಾಪಾಸ್ ಪಡಿಬೇಕು
ನಗದು ರಹಿತ ವೈದ್ಯಕೀಯ ಸೌಲಭ್ಯ, ಉತ್ತಮ ಕ್ಯಾಂಟೀನ್ ವ್ಯವಸ್ಥೆ
ವಿದ್ಯುತ್ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ನಿಯೋಜಿಸಬೇಕು
ವಿದ್ಯುತ್ ಬಸ್‌ಗಳ ನಿರ್ವಹಣೆಯನ್ನ ಖಾಸಗಿಯವರಿಗೆ ನೀಡಬಾರದು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ