/newsfirstlive-kannada/media/media_files/2025/12/15/cold-wave-grips-in-north-karnataka-2025-12-15-14-43-39.jpg)
ಉತ್ತರ ಕರ್ನಾಟಕದಲ್ಲಿ ಇನ್ನೂ 2 ದಿನ ಶೀತಗಾಳಿಯ ಹೊಡೆತ
ದಟ್ಟ ಮಂಜಿನಿಂದ ಸಿಲಿಕಾನ್ ಸಿಟಿ ಬೆಂಗಳೂರು ಜನರು ತತ್ತರಿಸಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿಗೆ ಇಳಿಕೆಯಾಗಿದೆ. ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ಬಾಗಲಕೋಟೆಗೆ ಆರೆಂಜ್ ಅಲರ್ಟ್​, ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಥಂಡಾ ಹೊಡೆದ ಉತ್ತರ ಕರ್ನಾಟಕ, ಜನರು ವಾಕಿಂಗ್​​​​ ತೆರಳದಂತೆ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಮೈಕೊರೆಯುವ ಚಳಿಯಿಂದ ಜನಜೀವನ ತತ್ತರಿಸಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಥಂಡಾ ಹೊಡೆದಿವೆ. ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಹಾಗೆಯೇ ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ . ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕೇವಲ 7 ಡಿಗ್ರಿ ತಾಪಮಾನ ದಾಖಲಾಗಿದ್ದು, ಜನರ ಜೀವನ ತತ್ತರಗೊಂಡಿದೆ. ಕಳೆದ ಹತ್ತು ವರ್ಷಗಳಲ್ಲಿ ಎರಡನೆಯ ಬಾರಿಗೆ ತಾಪಮಾನ ಕನಿಷ್ಠ ಮಟ್ಟ ತಲುಪಿದೆ. 2023ರಲ್ಲಿ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈಗ 7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದ್ದು , ತಾಪಮಾನ 6 ಡಿಗ್ರಿ ಸೆಲ್ಸಿಯಸ್​ಗೆ ಕುಸಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
/filters:format(webp)/newsfirstlive-kannada/media/media_files/2025/12/01/cold-weather-in-bangalore-2025-12-01-17-58-24.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us