Advertisment

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುವರ್ಣ ಮಹೋತ್ಸವ ಸಂಭ್ರಮ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಿಸಿಕೊಂಡಿದ್ದು ಇದೇ ನವೆಂಬರ್ 18 ಮತ್ತು 19ರಂದು ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ನಡೆಯಲಿದೆ

author-image
Ganesh Kerekuli
Updated On
chittapura RSS (10)
Advertisment

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಿಸಿಕೊಂಡಿದ್ದು ಇದೇ ನವೆಂಬರ್ 18 ಮತ್ತು 19ರಂದು ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ವೇಳೆ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಕೆಲಸ ಮಾಡಿದ ಸಾಧಕರಿಗೆ ರಾಜ್ಯ ಮಟ್ಟದ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿಯನ್ನು ಐವರಿಗೆ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿಎಂ ನರೇಂದ್ರಸ್ವಾಮಿ ಅವರು ತಿಳಿಸಿದರು.

Advertisment

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರಸ್ವಾಮಿ ಅವರು, ಮೊದಲ ದಿನವಾದ ನವೆಂಬರ್ 18ರಂದು ‘ಸರ್ಕ್ಯುಲರ್ ಎಕಾನಮಿ ಅಂಡ್ ಸಸ್ಟೈನಬಿಲಿಟಿ’ ಎಂಬ ವಿಷಯವನ್ನು ಆಧರಿಸಿದ ವಿಚಾರಸಂಕಿರಣವನ್ನು ಆಯೋಜಿಸಲಾಗಿದೆ. ವಿಚಾರ ಸಂಕಿರಣದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಮತ್ತು ಮರುಬಳಕೆ, ಘನತ್ಯಾಜ್ಯ ನಿರ್ವಹಣೆ, ನಿರ್ಮಾಣ ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಮತ್ತು ಇ-ತ್ಯಾಜ್ಯ ನಿರ್ವಹಣೆ, ತ್ಯಾಜ್ಯ ನಿರ್ವಹಣೆಯಲ್ಲಿ ವಿತರಣಾ ಆರ್ಥಿಕತೆ, ವ್ಯವಹಾರಿಕ ಹೊಣೆಗಾರಿಕೆ ಮತ್ತು ಸ್ಥಿರತೆಯ ಸೂಚ್ಯಂಕ ನಿರ್ಮಾಣದ ಮಹತ್ವ, ವಿಸ್ತೃತ ಉತ್ಪಾದಕ ಹೊಣೆಗಾರಿಕೆ ವ್ಯವಸ್ಥೆ – ಸವಾಲುಗಳು ಮತ್ತು ಅವಕಾಶಗಳು, ಇ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಬ್ಯಾಟರಿ ತ್ಯಾಜ್ಯ ನಿರ್ವಹಣೆ ಹಾಗು ಬ್ಯಾಟರಿ ತ್ಯಾಜ್ಯ ನಿರ್ವಹಣೆಯಲ್ಲಿ ವಿತರಣಾ ಆರ್ಥಿಕತೆ ಎಂಬ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಮೊದಲ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನಾದ ನಾನು ಪ್ರಾಸ್ತಾವಿಕ ಭಾಷಣ ಮಾಡುವೆ. ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಉಪಸ್ಥಿತರಿರುವರು ಎಂದು ತಿಳಿಸಿದರು.

ಎರಡನೇ ದಿನವಾದ ನವೆಂಬರ್ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾರೋಪ ಸಮಾರಂಭವನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ. ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಾನು ಮೊದಲ ದಿನದ ವಿಚಾರ ಸಂಕಿರಣದಲ್ಲಿ ವಿಷಯ ತಜ್ಞರು ನೀಡಿದ ಸಲಹೆಗಳನ್ನು ಆಧರಿಸಿ ಸರ್ಕಾರ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸುವೆ. ಹಾಗೆಯೇ ರಾಜ್ಯಾದ್ಯಂತ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳ ವರದಿ ನೀಡಲಿದ್ದಾರೆ.

Advertisment

ಇದನ್ನೂ ಓದಿ: ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ.. ಅಪ್ಪನ ಕಾರಿನಡಿ ಸಿಲುಕಿ ಪ್ರಾಣಬಿಟ್ಟ ಮಗು

chittapura RSS (9)

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಕ್ಷೇತ್ರದಲ್ಲಿ ಎಲೆಮರೆಯ ಕಾಯಿಯಂತೆ ಕೆಲಸ ಮಾಡುತ್ತಿರುವ ಸಾಧಕರನ್ನು ಹುಡುಕಿ ಅವರಿಗೆ ಜಿಲ್ಲಾ ಮಟ್ಟದ ‘ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ’ಯನ್ನೂ ನೀಡಲಾಗುವುದು. ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರಶಸ್ತಿ ನೀಡಲಾಗಿದೆ ಎಂದು ಹೇಳಿದರು.

ಸುವರ್ಣ ಮಹೋತ್ಸವ ಬೆಂಗಳೂರಿಗೆ ಸೀಮಿತವಾಗಬಾರದು, ಹಳ್ಳಿಹಳ್ಳಿ ತಲುಪಬೇಕು ಎನ್ನುವ ಕಾರಣಕ್ಕೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಾದವರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಗೌರವಿಸಿ ಪ್ರಶಸ್ತಿ ಪತ್ರ ನೀಡಲಾಗಿದೆ. ಜೊತೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ಪರಿಸರದ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisment

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಇರುವ ಕಾಯಿದೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, 1974ರಲ್ಲಿ  ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಅಡಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರನ್ನು ಸ್ಮರಿಸುವುದು ಮತ್ತು ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕೆಲಸಗಳಲ್ಲಿ ಯುವಕರು ಹಾಗು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ಮಾಡುವುದು ಸುವರ್ಣ ಮಹೋತ್ಸವದ ಧ್ಯೇಯೋದ್ದೇಶವಾಗಿದೆ ಎಂದು ಪಿಎಂ ನರೇಂದ್ರಸ್ವಾಮಿ ಅವರು ತಿಳಿಸಿದರು.

ಯುವಕರನ್ನು ಒಳಗೊಳ್ಳದೆ ಮಾಲಿನ್ಯ ನಿಯಂತ್ರಣ ಮಾಡುವುದು ಸಾಧ್ಯವೇ ಇಲ್ಲ ಎನ್ನುವುದನ್ನು ಮನಗೊಂಡು ಯುವಕರಿಗೆ ಪರಿಸರ ಜಾಗೃತಿ ಮೂಡಿಸುವ ಕುರಿತು ರಿಲ್ಸ್ ಮಾಡುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಅತ್ಯುತ್ತಮ ರಿಲ್ಸ್ ಗೆ 50 ಸಾವಿರ ರೂಪಾಯಿ ಬಹುಮಾನ ಎಂದು ಘೋಷಿಸಲಾಗಿದೆ. ದ್ವಿತೀಯ ಬಹುಮಾನಕ್ಕೆ 25 ಸಾವಿರ ರೂಪಾಯಿ ಮತ್ತು ತೃತೀಯ ಬಹುಮಾನಕ್ಕೆ 10 ಸಾವಿರ ರೂಪಾಯಿ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಟೆಸ್ಟ್​ ಪಂದ್ಯದ ಮಧ್ಯೆ ತಂಡಕ್ಕೆ ಆಘಾತ.. ಕ್ಯಾಪ್ಟನ್ ಗಿಲ್ ಆಸ್ಪತ್ರೆಗೆ ದಾಖಲು

Advertisment

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Pollution Control Board
Advertisment
Advertisment
Advertisment