/newsfirstlive-kannada/media/media_files/2025/08/10/pm_modi-2025-08-10-06-57-26.jpg)
ಬೆಂಗಳೂರು: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋದ ಹಳದಿ ಮಾರ್ಗ ಹಾಗೂ ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30ರ ವರೆಗೆ ತಾತ್ಕಾಲಿಕವಾಗಿ ಈ ನಿರ್ಬಂಧ ಅನ್ವಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಳಕಂಡಂತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ಎಲ್ಲ ವಾಹನಗಳನ್ನ ಬನ್ನೇರುಘಟ್ಟ ರಸ್ತೆ ಮುಖಾಂತರ ಸಂಚರಿಸಲು ಮಾರ್ಗ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ: ಪಾಕ್ನ 5 F-16 ಫೈಟರ್ ಜೆಟ್, 1 ದೊಡ್ಡ ವಿಮಾನ ಹೊಡೆದುರುಳಿಸಿದ್ದೇವೆ- ಏರ್ಚೀಫ್ ಮಾರ್ಷಲ್
ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
- ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್‌ವರೆಗೆ
- ಕನಕಪುರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ ಇರುತ್ತದೆ
- ನಾಯಂಡಹಳ್ಳಿ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಸೋಂಪುರ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಬೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಪಿಇಎಸ್ ಕಾಲೇಜು ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧವಿದೆ
- ಮಾಗಡಿ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಬೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಮಾಧವರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಪಾರ್ಲೆ ಬಿಸ್ಕಟ್ಸ್ ಫಾಕ್ಟರಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ಸಂಚಾರಕ್ಕೆ ಪರ್ಯಾಯ ಮಾರ್ಗಗಳು
ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ, ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಶನ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್ ವುಡ್ ಜಂಕ್ಷನ್-ಕೋಳಿಫಾರಂಗೇಟ್ ಜಂಕ್ಷನ್-ಬನ್ನೇರುಘಟ್ಟ ಗ್ರಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ /ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿರುತ್ತದೆ.
ದಾಬಸ್‌ಪೇಟೆ ಬಳಿ ಎಡ ತಿರುವು ಪಡೆದು- ದೊಡ್ಡಬಳ್ಳಾಪುರ- ದೇವನಹಳ್ಳಿ- ಸೂಲಿಬೆಲೆ- ಹೊಸಕೋಟೆ- ಮಾರ್ಗವಾಗಿ ಚಲಿಸಿ- ಚಂದಾಪುರ- ಅತ್ತಿಬೆಲೆ- ಹೊಸೂರು ರಸ್ತೆ ತಲುಪಬಹುದಾಗಿರುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ