/newsfirstlive-kannada/media/media_files/2025/08/07/rahul-gandhi-duplicate-voters-fake-addresses-2025-08-07-16-19-00.jpg)
ರಾಹುಲ್ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಾಳೆ ಬೆೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ವಿರುದ್ಧದ ಱಲಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡುವರು. ಬೆಂಗಳೂರಿನ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷದ ಱಲಿ ನಡೆಯಲಿದೆ. ಫ್ರೀಡಂ ಪಾರ್ಕ್ ನ ಕಾಂಗ್ರೆಸ್ ಱಲಿಯಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿ ಆಗುವರು. ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸುವುದರಿಂದ ಶೇಷಾದ್ರಿ ರಸ್ತೆಯಲ್ಲಿ ನಾಳೆ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿನ ಜನರು ಶೇಷಾದ್ರಿ ರಸ್ತೆ, ಕೆ.ಆರ್. ಸರ್ಕಲ್, ಮೆಜೆಸ್ಟಿಕ್ ಸುತ್ತಮುತ್ತ ಸಂಚರಿಸುವವರು ನಾಳೆ ಪರ್ಯಾಯ ಮಾರ್ಗಗಳನ್ನು ಬಳಸಿದರೇ, ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಳ್ಳುವುದರಿಂದ ಪಾರಾಗಬಹುದು. ಇಲ್ಲದಿದ್ದರೇ, ನಿನ್ನೆ, ಇಂದು ಕೆ.ಆರ್. ಮಾರ್ಕೆಟ್ ಬಳಿಯ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಂತೆ ನಾಳೆ ಟ್ರಾಫಿಕ್ ಜಾಮ್ ನಲ್ಲಿ ಗಂಟೆಗಟ್ಟಲೇ ಸಿಲುಕಿಕೊಳ್ಳಬೇಕಾಗುತ್ತೆ. ಬೆಂಗಳೂರಿನ ಟ್ರಾಫಿಕ್ ಪೊಲೀಸರು ಕೂಡ ನಾಳೆ ವಾಹನಗಳನ್ನು ಡೈವರ್ಟ್ ಮಾಡುತ್ತಾರೆ. ಈ ಬಗ್ಗೆ ಟ್ರಾಫಿಕ್ ಜಂಟಿ ಕಮೀಷನರ್ ಕಾರ್ತಿಕ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ನಾಳೆ ಱಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ 2.30ಕ್ಕೆ ಮುಗಿಯುವ ನಿರೀಕ್ಷೆ ಇದೆ. ಸಾರ್ವಜನಿಕರಿಗೆ ಟ್ರಾವೆಲ್ ಸಲಹೆಯನ್ನು ಕಾರ್ತಿಕ್ ರೆಡ್ಡಿ ನೀಡಿದ್ದಾರೆ. ಮಹಾರಾಣಿ ಕಾಲೇಜು ಜಂಕ್ಷನ್, ಆನಂದ್ ರಾವ್ ಸರ್ಕಲ್ , ಪ್ಯಾಲೇಸ್ ರಸ್ತೆಯ ಜಂಕ್ಷನ್ ನಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಭಾರಿ ವಾಹನಗಳನ್ನು ಪ್ಯಾಲೇಸ್ ಗ್ರೌಂಡ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಕಾರ್ ಗಳಿಗೆ ಬಿನ್ನಿಮಿಲ್ ಮತ್ತು ಕಂಠೀರವ ಸ್ಟೇಡಿಯಂನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶಾಸಕರುಗಳಿಗೆ ಜ್ಞಾನಜ್ಯೋತಿ ಅಡಿಟೋರಿಯಂನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಟ್ರಾಫಿಕ್ ಜಂಟಿ ಪೊಲೀಸ್ ಕಮೀಷನರ್ ಕಾರ್ತಿಕ್ ರೆಡ್ಡಿ ಮಾಹಿತಿ ನೀಡಿದ್ದಾರೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 7, 2025
ಕಾಂಗ್ರೆಸ್ ಪಕ್ಷವು ವಿವಿಧ ಜಿಲ್ಲೆಗಳಿಂದ ಬಸ್ ಗಳಲ್ಲಿ ಕಾರ್ಯಕರ್ತರನ್ನು ನಾಳೆ ಬೆಂಗಳೂರಿಗೆ ಕರೆಸುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ 50 ಮಂದಿ ಭಾಗಿಯಾಗುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾಳೆ ಐದಾರು ಸಾವಿರ ಬಸ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ನಿರೀಕ್ಷೆ ಇದೆ. ಹೀಗಾಗಿ ಬೆಂಗಳೂರಿನ ಹೃದಯ ಭಾಗವಾದ ಫ್ರೀಡಂ ಪಾರ್ಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವುದು ನಿಶ್ಚಿತ. ಹೀಗಾಗಿ ಶೇಷಾದ್ರಿ ರಸ್ತೆ, ಪ್ಯಾಲೇಸ್ ರಸ್ತೆ, ಕೆ.ಆರ್. ಸರ್ಕಲ್ ಕಡೆ ಹೋಗುವವರು ಈ ರಸ್ತೆಗಳ ಬದಲು ಬೇರೆ ಪರ್ಯಾಯ ರಸ್ತೆಗಳನ್ನು ಬಳಸಿದರೇ, ಸಮಯ, ಶ್ರಮ ಎಲ್ಲವೂ ಉಳಿತಾಯವಾಗಲಿದೆ. ಇನ್ನೂ ನಾಳೆ ( ಆಗಸ್ಟ್ 8) ಬೆಳಿಗ್ಗೆ ರಾಹುಲ್ ಗಾಂಧಿ ಬೆಂಗಳೂರಿನ ಎಚ್‌ಎಎಲ್ ಏರ್ ಪೋರ್ಟ್ ಗೆ ಬಂದಿಳಿಯಲಿದ್ದಾರೆ. ಹೀಗಾಗಿ ನಾಳೆ ಬೆಳಿಗ್ಗೆ 10.30 ರಿಂದ 11.30 ರವರೆಗೆ ಹಾಗೂ ಮಧ್ಯಾಹ್ನ 3.30 ರಿಂದ ಸಂಜೆ 4.30 ರವರೆಗೆ ಹಳೇ ವಿಮಾನ ನಿಲ್ದಾಣ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ಜೊತೆಗೆ ಹಳೇ ವಿಮಾನ ನಿಲ್ದಾಣ ರಸ್ತೆ, ಎಂ.ಜಿ.ರಸ್ತೆ ಹಾಗೂ ಕಬ್ಬನ್ ರಸ್ತೆಯ ಬದಲು ಪರ್ಯಾಯ ರಸ್ತೆಗಳನ್ನು ವಾಹನ ಓಡಾಟಕ್ಕಾಗಿ ಬಳಸುವಂತೆ ಸಾರ್ವಜನಿಕರಿಗೆ ಬೆಂಗಳೂರಿನ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
#ಸಂಚಾರಸಲಹೆ#TrafficAdvisory@DgpKarnataka@KarnatakaCops@CPBlr@Jointcptraffic@BlrCityPolice@blrcitytraffic@acpwfieldtrf@acpeasttraffic@mahadevapuratrf@halairporttrfps@KRPURATRAFFIC@wftrps@bwaditrafficps@ftowntrfps@jbnagartrfps@halasoortrfps@kghallitrfps… pic.twitter.com/Rbu6ls3q6F
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) August 7, 2025
ರಾಹುಲ್ ಗಾಂಧಿ ಈಗಾಗಲೇ ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತಗಳವು ಆಗಿದೆ ಎಂದು ಪಿಪಿಟಿ ಪ್ರಸಂಟೇಷನ್ ನೀಡಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಆರೋಪಕ್ಕೆ ಸಾಕ್ಷ್ಯ ನೀಡುವ ಪ್ರಯತ್ನವನ್ನು ನಾಳೆಯ ಱಲಿಗೂ ಮುನ್ನ ಇಂದೇ ಮಾಡಿದ್ದಾರೆ. ಹೀಗಾಗಿ ನಾಳೆಯ ಱಲಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಮತ್ತಷ್ಟು ಗಂಭೀರ ಆರೋಪ ಮಾಡುವ ಸಾಧ್ಯತೆ ಇದೆ. ಈಗಾಗಲೇ ದೇಶದಲ್ಲಿ ಚುನಾವಣಾ ಆಯೋಗವು ಸತ್ತಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.