/newsfirstlive-kannada/media/media_files/2025/08/04/ksrtc_bus_hsn-2025-08-04-22-30-02.jpg)
ಹೈಕೋರ್ಟ್ ನಲ್ಲಿ ಸಾರಿಗೆ ಮುಷ್ಕರ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಯಿತು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ಮುಷ್ಕರ ನಡೆಸಬಾರದೆಂದು ಆದೇಶ ನೀಡಿದ್ದರೂ, ನೀವು ಅದನ್ನು ಪಾಲಿಸಿಲ್ಲ. ಎಸ್ಮಾ ಕಾಯಿದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿದೆ. ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡದೇ ಇದ್ದರೇ, ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಎಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಗೆ ವಾರ್ನಿಂಗ್ ನೀಡಿದೆ.
ಇದರಿಂದಾಗಿ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸುವುದಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದ್ದಾರೆ.
ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಎಜಿ ಹೈಕೋರ್ಟ್ ಗೆ ತಿಳಿಸಿದ್ದರು. ರಾಜಿ ಸಂಧಾನದ ಮಾತುಕತೆ ಏನಾಗಿದೆ ಎಂದು ಹೈಕೋರ್ಟ್ ಪ್ರಶ್ನೆ ಮಾಡಿತು. ಇಲ್ಲಿಯವರೆಗೆ ನಡೆದ ಮಾತುಕತೆಗಳ ವಿವರವನ್ನು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ನೀಡಿದ್ದರು. ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆ ಯಂತೆ ಸಂಧಾನ ಸಭೆ ನಡೆಸಲಾಗುತ್ತಿದೆ ಎಂದು ಎಜಿ ಮಾಹಿತಿ ನೀಡಿದ್ದರು.
ಸಾರಿಗೆ ಸಂಘಟನೆಗಳ ವಕೀಲರಿಗೆ ನ್ಯಾಯಾಂಗ ನಿಂದನೆಯ ಎಚ್ಚರಿಕೆಯನ್ನು ಹೈಕೋರ್ಟ್ ನೇರವಾಗಿ ನೀಡಿದೆ. ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ.ಜೋಷಿ ಅವರಿದ್ದ ಪೀಠ ಎಚ್ಚರಿಕೆ ನೀಡಿದೆ. ಮುಷ್ಕರ ನಿಲ್ಲಿಸಲಾಗಿದೆಯೇ ಎಂದು ಹೈಕೋರ್ಟ್ ಪ್ರಶ್ನೆ ಮಾಡಿತು. ಎಸ್ಮಾ ಜಾರಿಯಾಗಿದೆ ಎಂದು ಸಂಘಟನೆಯ ಪದಾಧಿಕಾರಿಗಳಿಗೆ ಹೈಕೋರ್ಟ್ ಎಚ್ಚರಿಕೆ ನೀಡಿತು. ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಎಚ್ಚರಿಕೆ ನೀಡಿತು. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು. ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಜನಸಾಮಾನ್ಯರನ್ನು
ಒತ್ತೆಯಾಳಾಗಿರಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರಿದ್ದ ಪೀಠ ತರಾಟೆಗೆ ತೆಗೆದುಕೊಂಡಿತ್ತು,