/newsfirstlive-kannada/media/media_files/2025/08/30/dharmasthala-case-3-2025-08-30-15-41-30.jpg)
ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು, ಶ್ರೀ ಕೇದಾರ ಭೀಮಾಶಂಕರ ಜಗದ್ಗುರುಗಳು, ಶ್ರೀಶೈಲ ಡಾ.ಚನ್ನಸಿದ್ಧರಾಮ ಜಗದ್ಗುರುಗಳು, ಶ್ರೀ ಕಾಶೀ ಡಾ.ಚಂದ್ರಶೇಖರ ಜಗದ್ಗುರುಗಳು, ನೂತನ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಜಗದ್ಗುರುಗಳು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ‘ವಾಸಂತಿ ಶ್ರೀವತ್ಸ ಇನ್ನೂ ಬದುಕಿದ್ದಾಳೆ’.. ಸುಜಾತಾ ಭಟ್ ಕಟ್ಟಿದ ಕಟ್ಟು ಕಥೆಗೆ ಮೇಜರ್ ಟ್ವಿಸ್ಟ್..
ಧರ್ಮ ಕ್ಷೇತ್ರಗಳು ತಮ್ಮದೇ ಆದ ಸಂಸ್ಕೃತಿ ಮತ್ತು ಪರಂಪರೆ ಅನುಸರಿಸುತ್ತವೆ. ಅಂತಹ ಧರ್ಮ ಕ್ಷೇತ್ರಗಳಲ್ಲಿ ರಾಜಕೀಯವನ್ನು ಬೆರೆಸುವ ಕೆಲಸ ಯಾರೂ ಮಾಡಬಾರದು. ಅನಾವಶ್ಯಕವಾಗಿ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು, ಭಕ್ತರ ಮತ್ತು ಸಮಾಜದ ಹಾಗೂ ಸರ್ಕಾರದ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ.
ಸನಾತನ ಧರ್ಮ ತೇಜೋವಧೆಗೆ ಕಾಣದ ಕೈಗಳು ಹುನ್ನಾರ ನಡೆಸಿವೆ. ಸರ್ಕಾರ ರಚನೆ ಮಾಡಿರುವ ವಿಶೇಷ ತನಿಖಾ ಸಂಸ್ಥೆಯು ಮೇಲ್ನೋಟಕ್ಕೆ ಆರೋಪಿಗಳಾರೋರ ವಿಚಾರಣೆ ನಡೆಸುತ್ತಿದ್ದು, ಈ ಒಟ್ಟಾರೆ ಪ್ರಕರಣದ ಹಿಂದಿನ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಆದಷ್ಟು ಬೇಗ ಅವರಿಗೆ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದ್ದಾರೆ.
ನಾಡಿಗೆ ವಿಶೇಷ ಕೊಡುಗೆ
ನಾಡಿನಲ್ಲಿರುವ ಅನೇಕ ಮಠ-ಮಂದಿರಗಳು ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಾಚೀನ ಕಾಲದಿಂದಲೂ ಕಾರ್ಯ ನಿರ್ವಹಿಸಿಕೊಂಡು ಬಂದಿವೆ. ಅಂತೆಯೇ ಧರ್ಮಸ್ಥಳ ಕ್ಷೇತ್ರ ಶತಮಾನಗಳ ಇತಿಹಾಸ ಹೊಂದಿದ್ದು ನಾಡಿಗೆ ವಿಶೇಷ ಕೊಡುಗೆ ನೀಡಿದೆ. ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಕಳೆದ 50 ವರ್ಷಗಳಿಂದ ಧರ್ಮ ಸಂಸ್ಕೃತಿ ಪುನುರುತ್ಥಾನಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ:ಬಿಸಿಸಿಐನ ಈ ನಡವಳಿಕೆ ಸರಿಯಿಲ್ಲ.. ದಿಗ್ಗಜರಿಗೆ ಕನಿಷ್ಠ ಗೌರವವೂ ಇಲ್ಲದಾಯಿತೇ..?
ಇಂತಹ ಕ್ಷೇತ್ರದ ಮೇಲೆ ಬಂದಿರುವ ಆರೋಪಗಳು ಮುಕ್ತವಾಗಿ ಆದಷ್ಟು ಬೇಗ ಮೊದಲಿನಂತೆ ಎಲ್ಲ ಸಾಮಾಜಿಕ ಕಾರ್ಯಗಳು ಮುಂದುವರೆಯುವಂತಾಗಲಿ ಎಂದು ಹಾರೈಸಿರುವ ಜಗದ್ಗುರು ಪಂಚಪೀಠಾಧೀಶ್ವರರು ಹಿಂದೂ ಸಂಸ್ಕೃತಿಯ ಬಗ್ಗೆ ಇತ್ತೀಚಿಗೆ ಕೆಲವು ನಾಸ್ತಿಕರು ಅಲ್ಲಲ್ಲಿ ವಾತಾವರಣ ಕಲುಷಿತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅಂತವರನ್ನು ಗುರುತಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ದರ್ಶನ್..? ಇಂದು ಕೋರ್ಟ್ನಲ್ಲಿ ಭವಿಷ್ಯ ನಿರ್ಧಾರ!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ