/newsfirstlive-kannada/media/media_files/2025/08/05/namma-metro2-2025-08-05-11-51-39.jpg)
ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಇಳಿದಿದ್ದಾರೆ. ಈ ಎಫೆಕ್ಟ್‌ನಿಂದಾಗಿ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಸಾಲಿನಲ್ಲಿ ನಿಂತುಕೊಂಡಿರೋ ದೃಶ್ಯ ಕಂಡು ಬಂದಿದೆ.
ಇದನ್ನೂ ಓದಿ:ಬೆಳಗ್ಗೆ 6 ಗಂಟೆಯಿಂದ ಮುಷ್ಕರ.. ಬಸ್ ಡಿಪೋ ಕಡೆಗೆ ಹೋಗಬೇಡಿ, ಮನೆಯಲ್ಲಿ ಇರಿ; ಅನಂತ
ಬಸ್ ಸರಿಯಾಗಿ ಸಿಗದೆ ಪರದಾಡುತ್ತಿರುವ ಪ್ರಯಾಣಿಕರೆಲ್ಲಾ ನಮ್ಮ ಮೆಟ್ರೋದ ಮೊರೆ ಹೋಗಿದ್ದಾರೆ. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ಎಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡ್ತಿದ್ದಾರೆ. ದಿನನಿತ್ಯಕ್ಕಿಂತ ಮೆಟ್ರೋ ಪ್ರಯಾಣಿಕರು ಹೆಚ್ಚಾಗಿರುವುದರಿಂದ ತೊಂದರೆಯಾಗದಂತೆ ಮೆಟ್ರೋ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಅಷ್ಟೇ ಅಲ್ಲದೇ ಮೆಟ್ರೋ ನಿಲ್ದಾಣದ ಹೊರಗಿನಿಂದಲೂ ಪ್ರಯಾಣಿಕರು ಕ್ಯೂನಲ್ಲಿ ಒಳಗಡೆ ಬರುತ್ತಿದ್ದಾರೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಕ್ಯೂ ಗಟ್ಟಲೆ ಪ್ರಯಾಣಿಕರು ಜಮಾಯಿಸಿದ್ದರಿಂದ ಮೆಟ್ರೋ ನಿಲ್ದಾಣದ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ