ಸಾರಿಗೆ ನೌಕರರ ಮುಷ್ಕರ ಎಫೆಕ್ಟ್​.. ಮೆಟ್ರೋ ನಿಲ್ದಾಣದ ಮುಂದೆ ಕ್ಯೂ ನಿಂತ ಪ್ರಯಾಣಿಕರು

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬಸ್​ಗಳನ್ನು ರಸ್ತೆಗಿಳಿಸಿಲ್ಲ. ​ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್​ ನಮ್ಮ ಮೆಟ್ರೋ ಪ್ರಯಾಣಿಕರ ಮೇಲೆ ಬಿದ್ದಿದೆ.

author-image
Veenashree Gangani
Updated On
namma metro
Advertisment

ಬೆಂಗಳೂರು: ಇಂದು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬಸ್​ಗಳನ್ನು ರಸ್ತೆಗಿಳಿಸಿಲ್ಲ. ​ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್​ ನಮ್ಮ ಮೆಟ್ರೋ ಪ್ರಯಾಣಿಕರ ಮೇಲೆ ಬಿದ್ದಿದೆ. 

ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ; ಎಂದಿನಂತೆ ಮೆಜೆಸ್ಟಿಕ್​ನಲ್ಲಿ BMTC ಬಸ್​ಗಳ ಸಂಚಾರ..!

namma metro(1)

ಹೌದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಬಂದ್​ಗೆ ಕರೆ ನೀಡಿದ್ದರು. ಈ ಬೆನ್ನಲ್ಲೇ ಬಸ್​ಗಳು ಸಿಗೋದಿಲ್ಲ ಅನ್ನೋ ಕಾರಣಕ್ಕೆ ಪ್ರಯಾಣಿಕರು ನಮ್ಮ ಮೆಟ್ರೋ ಕಡೆ ಮುಖ ಮಾಡಿದ್ದಾರೆ.

ಮೆಜೆಸ್ಟಿಕ್​ನಲ್ಲಿ ನಮ್ಮ ಮೆಟ್ರೋ ನಿಲ್ದಾಣದ ಮುಂದೆ ಸರತಿ ಸಾಲಿನಲ್ಲಿ ಪ್ರಯಾಣಿಕರು ನಿಂತುಕೊಂಡಿದ್ದಾರೆ. ಪ್ರತಿನಿತ್ಯ ನಮ್ಮ ಮೆಟ್ರೋದಲ್ಲಿ ಅಂದಾಜು 8 ಲಕ್ಷ ಪ್ರಯಾಣಿಕರು ಸಂಚರಿಸುತ್ತಾರೆ. ಆದ್ರೆ ಇಂದು ಸಾರಿಗೆ ನೌಕರರ ಮುಷ್ಕರದಿಂದ  ಆ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಆಯೋಜನೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Transport strike
Advertisment