/newsfirstlive-kannada/media/media_files/2026/01/09/tumakuru-accident-2026-01-09-09-01-28.jpg)
ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಅಯ್ಯಪ್ಪಸ್ವಾಮಿ ಭಕ್ತರು ಮೃತಪಟ್ಟಿರುವ ಘಟನೆ ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೆಂಕಟೇಶ್(30), ಮಾರುತ್ತಪ್ಪ(44), ಸಾಕ್ಷಿ (7) ಹಾಗೂ ಮತ್ತೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರೆಲ್ಲ ಕೊಪ್ಪಳ ಜಿಲ್ಲೆಯ ಕುಕನೂರು ಮೂಲದವರು ಎನ್ನಲಾಗಿದೆ. ಅಯ್ಯಪ್ಪ ಸ್ವಾಮಿ ದರ್ಶನ ಮುಗಿಸಿ ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಕ್ರೂಸರ್​ನಲ್ಲಿ ಒಟ್ಟು 11 ಭಕ್ತರಿದ್ದರು, ಅವರಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರೂಸರ್​ನ ಮುಂಭಾಗದಲ್ಲಿದ್ದ ನಾಲ್ವರು ಪ್ರಾಣಬಿಟ್ಟಿದ್ದಾರೆ.
ಮುಂಜಾನೆ ಸುಮಾರು 5 ಗಂಟೆಯಲ್ಲಿ ನಿಂತಿದ್ದ ಲಾರಿಗೆ ಮಾಲಾಧಾರಿಗಳ ವಾಹನ ಡಿಕ್ಕಿಯಾಗಿ ದುರಂತ ನಡೆದಿದೆ. ಬೆಳ್ಳಾವಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತವಾಗಿದೆ. ದುರ್ಘಟನಾ ಸ್ಥಳಕ್ಕೆ ಎಸ್​ಪಿ ಅಶೋಕ್ ವೆಂಕಟ್, ಕೋರಾ ಪೊಲೀಸರು ಭೇಟಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us