/newsfirstlive-kannada/media/media_files/2025/10/27/vn-reddy-2025-10-27-22-07-26.jpg)
ತುಮಕೂರು: ಗಡಿನಾಡು ಪಾವಗಡ ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವೆಂಕಟಾಪುರ ಗ್ರಾಮದ 103 ವಯಸ್ಸಿನ ವಿ.ಎನ್.ರೆಡ್ಡಿ ಅವರು ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡು ಆಗಿನ ಯುವ ಸಮುದಾಯವನ್ನು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಸ್ವಾತಂತ್ರ್ಯದ ನಂತರ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದ ವಿ.ಎನ್.ರೆಡ್ಡಿಯಾವರು ಪಾವಗಡ ಮಂಡಲ ಪಂಚಾಯಿತಿ ಅಧ್ಯಕ್ಷರಾಗಿ 30 ವರ್ಷಗಳ ಕಾಲ ಸುದೀರ್ಘವಾಗಿ ಸೇವೆ ಸಲ್ಲಿಸಿದ್ದರು.
ರೆಡ್ಡಿಯವರು ಇಬ್ಬರು ಪುತ್ರರು, ಐದು ಜನ ಪುತ್ರಿಯರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು, ಅಭಿಮಾನಿಗಳನ್ನು ಅಗಲಿದ್ದಾರೆ, ಹೋರಾಟಗಾರ ನಿಧನಕ್ಕೆ ಶಾಸಕರಾದ ಹೆಚ್.ವಿ.ವೆಂಕಟೇಶ್ ಸೇರಿದಂತೆ ತಾಲ್ಲೂಕಿನ ಅನೇಕ ಗಣ್ಯರು, ವೆಂಕಟಾಪುರ ಗ್ರಾಮದ ಮುಖಂಡರುಗಳು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: ತಾನೇ ಜನ್ಮ ಕೊಟ್ಟ ಮುದ್ದು ಮಕ್ಕಳ ಜೀವ ತೆಗೆದ ತಾಯಿ.. ಕಾರಣ ಏನ್ ಗೊತ್ತಾ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us