ಗೋಕರ್ಣ ಹೋಗಿ ಬರುವಾಗ ಭೀಕರ ಅಪಘಾತ.. ಸ್ಥಳದಲ್ಲೇ ಪ್ರಾಣಬಿಟ್ಟ ಮೂವರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

author-image
Ganesh Kerekuli
tumakuru accident (1)
Advertisment

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ವಿವರ

ತುಮಕೂರು ತಾಲೂಕಿನ ನೆಲಹಾಳ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದ್ದು, ಇವರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಪ್ರವಾಸ ಮುಗಿಸಿಕೊಂಡು ಇಂದು ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಇವರು ಸಂಚರಿಸುತ್ತಿದ್ದ ಮಾರುತಿ ಎರಿಟಿಗಾ ಕಾರು ಲಾರಿಗೆ ಹಿಂಬದಿಯಿಂದ ಅತೀ ವೇಗವಾಗಿ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: 2 ಪಂದ್ಯ ಬಾಕಿ ಇರುವಾಗಲೇ ಸರಣಿ ಗೆದ್ದ ಭಾರತ.. ನಿನ್ನೆಯ ಆಟದ ಹೈಲೈಟ್ಸ್..!

ಮೂವರು ಸಾವು, ಮೂವರಿಗೆ ಗಾಯ

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್‌ಪಿ ಭೇಟಿ

ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಶೋಕ್ ಕೆ.ವಿ ಹಾಗೂ ಕೋರಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರವಾಸ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಸಂಭವಿಸಿದ ಈ ದುರಂತ ಮೃತರ ಕುಟುಂಬಸ್ಥರಲ್ಲಿ ಶೋಕವನ್ನುಂಟು ಮಾಡಿದೆ.

ಇದನ್ನೂ ಓದಿ: 2 ಪಂದ್ಯ ಬಾಕಿ ಇರುವಾಗಲೇ ಸರಣಿ ಗೆದ್ದ ಭಾರತ.. ನಿನ್ನೆಯ ಆಟದ ಹೈಲೈಟ್ಸ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Tumakuru News Accident NEWS Tumkur
Advertisment