/newsfirstlive-kannada/media/media_files/2025/08/12/kn_rajanna-1-2025-08-12-07-41-24.jpg)
ತುಮಕೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಸ್ವಪಕ್ಷದ ವಿರುದ್ಧವೇ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿತ್ತು. ತಮ್ಮ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ನೀಡುತ್ತಿದ್ದಂತೆ ಅತ್ತ ಮಹಿಳಾ ಸದಸ್ಯೆ ಒಬ್ಬರು ಪುರಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಕೆ.ಎನ್ ರಾಜಣ್ಣ ಅವರು ಸಹಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಧುಗಿರಿ ಪುರಸಭೆ ಸದಸ್ಯತ್ವಕ್ಕೆ ಗಿರಿಜಾ ಮಂಜುನಾಥ್ ರಾಜೀನಾಮೆ ನೀಡಿದ್ದಾರೆ. ಗಿರಿಜಾ ಮಂಜುನಾಥ್ ಅವರು ಮಧುಗಿರಿಯ 10ನೇ ವಾರ್ಡ್ನ ಪುರಸಭೆಯ ಸದಸ್ಯೆ ಆಗಿದ್ದರು. ಸ್ವ ಇಚ್ಛೆಯಿಂದಲೇ ರಾಜೀನಾಮೆ ನೀಡರುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಇದನ್ನೂ ಓದಿ:ಬಾದಾಮಿಯಲ್ಲಿ 3 ಸಾವಿರ ಅಲ್ಲ, 30 ಸಾವಿರ ಮತ ಕಳ್ಳತನ; ವಿರೋಧ ಪಕ್ಷದ ನಾಯಕ ಗಂಭೀರ ಆರೋಪ
ಗಿರಿಜಾ ಮಂಜುನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಮಧುಗಿರಿಯ ಉಪ ವಿಭಾಗಾಧಿಕಾರಿಗೆ ಸಲ್ಲಿಕೆ ಮಾಡಿದ್ದಾರೆ. ಗಿರಿಜಾ ಮಂಜುನಾಥ್, ಕೆ.ಎನ್ ರಾಜಣ್ಣ ಬೆಂಬಲಿಗರಲ್ಲಿ ಒಬ್ಬರು ಆಗಿದ್ದಾರೆ. ಅವರ ಸ್ಥಾನದಿಂದ ಕೆಳಗಿಳಿಸಿದ ಬೆನ್ನಲ್ಲೇ ಗಿರಿಜಾ ಅವರು ಏನು ಯೋಚನೆ ಮಾಡದೇ ರಾಜೀನಾಮೆ ನೀಡಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ನಿನ್ನೆ ಸಂಜೆ ರಾಜಣ್ಣ, ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ನಾನು ಅಸಹಾಯಕ. ಹೈಕಮಾಂಡ್ ಆದೇಶ ಪಾಲಿಸಿದ್ದೇನೆ. ನಿಮ್ಮ ಹೇಳಿಕೆ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೇಳಿಕೆಗಳಿಂದ ಅವರು ಮುಜುಗರ ಅನುಭವಿಸಿದ್ದಾರೆ. ತಮ್ಮನ್ನ ಸಂಪುಟದಿಂದ ಕೖಬಿಡದೇ ಅನ್ಯ ಮಾರ್ಗ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ