ಬೈಕ್​ಗೆ ಡಿಕ್ಕಿ ಹೊಡೆದ ನಂದಿನಿ ಹಾಲಿನ ವಾಹನ.. ಉಸಿರು ಚೆಲ್ಲಿದ MBBS ವಿದ್ಯಾರ್ಥಿಗಳು

ಬೆಳಗಿನ ಜಾವ ಬೈಕ್​​ಗೆ ನಂದಿನಿ ಹಾಲಿನ ವಾಹನ ಡಿಕ್ಕಿ ಹೊಡೆದ ಪರಿಣಾಮ ಎಂಬಿಬಿಎಸ್​ ವಿದ್ಯಾರ್ಥಿಗಳು ಸ್ಥಳದಲ್ಲೇ ಜೀವ ಬಿಟ್ಟಿರುವ ಘಟನೆ ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ನಡೆದಿದೆ.

author-image
Bhimappa
SMG_MBBS_STUDENTS
Advertisment

ಶಿವಮೊಗ್ಗ: ಬೆಳಗಿನ ಜಾವ ಬೈಕ್​​ಗೆ ನಂದಿನಿ ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಎಂಬಿಬಿಎಸ್​ ವಿದ್ಯಾರ್ಥಿಗಳು ಸ್ಥಳದಲ್ಲೇ ಜೀವ ಬಿಟ್ಟಿರುವ ಘಟನೆ ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ನಡೆದಿದೆ. 

ಮೂರನೇ ವರ್ಷದ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್‌ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಆದಿತ್ಯ, ಸಂದೀಪ್‌ ಇಬ್ಬರು ಬೈಕ್​ನಲ್ಲಿ ತೆರಳುತ್ತಿದ್ದರು. ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಬೈಕ್​ ಬರುತ್ತಿದ್ದಂತೆ ಹಾಲಿನ ವಾಹನ ಭಯಾನಕವಾಗಿ ಡಿಕ್ಕಿ ಹೊಡೆದಿದೆ. 

ಇದನ್ನೂ ಓದಿ:ಜೋಗಿ ಪ್ರೇಮ್​ಗೆ ಲಕ್ಷ ಲಕ್ಷ ವಂಚನೆ.. ಎಮ್ಮೆಗಳನ್ನ ಕೊಡುವುದಾಗಿ, ಹಣ ಪಡೆದು ಕಿರಾತಕ ಪರಾರಿ

SMG_MBBS

ಇದರಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಒಬ್ಬರ ಮೇಲೆ ಒಬ್ಬರು ಬಿದ್ದಿದ್ದು ರಕ್ತದ ಮಡುವಿನಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯೂ ‍ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವಕರ ಮೃತದೇಹಗಳನ್ನ ಮೆಗ್ಗಾನ್‌ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

MBBS Students
Advertisment