/newsfirstlive-kannada/media/media_files/2026/01/26/baot-capsizes-at-udupi-beach-2026-01-26-15-47-58.jpg)
ಉಡುಪಿ ಬೀಚ್ ನಲ್ಲಿ ಮಗುಚಿ ಬಿದ್ದ ಬೋಟ್
ಉಡುಪಿ ತಾಲೂಕಿನ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಪ್ರವಾಸಿ ಬೋಟು ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಶಂಕರಪ್ಪ(22) ಸಿಂಧು ( 23) ಮೃತಪಟ್ಟಿದ್ದಾರೆ. ಧರ್ಮರಾಜ್, ದಿಶಾರನ್ನು ಸಮುದ್ರದ ಅಲೆಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮರಾಜ್, ದಿಶಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಡೆಲ್ಟಾ ಬೀಚ್ ನಿಂದ ಪ್ರವಾಸಿ ಬೋಟ್ ನಲ್ಲಿ 14 ಮಂದಿ ಪ್ರವಾಸಿಗರು ಹೊರಟಿದ್ದರು. ಎಲ್ಲ 14 ಮಂದಿಗೂ ಬೋಟ್ ಸಿಬ್ಬಂದಿ ಲೈಫ್ ಜಾಕೆಟ್ ಗಳನ್ನು ನೀಡಿದ್ದರು. ಆದರೇ, ಕೆಲ ಪ್ರವಾಸಿಗರು ಲೈಫ್ ಜಾಕೆಟ್ ಧರಿಸಿರಲಿಲ್ಲ. ಸಮುದ್ರದಲ್ಲಿ ಬೋಟ್ ಮಗುಚಿ ಬಿದ್ದಾಗ, ಲೈಫ್ ಜಾಕೆಟ್ ಧರಿಸದೇ ಇದ್ದವರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಪ್ರವಾಸಿಗರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮಗುಚಿ ಬಿದ್ದಿದೆ. ತಕ್ಷಣವೇ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಎಲ್ಲರನ್ನೂ ಸಮುದ್ರದಿಂದ ರಕ್ಷಿಸಿದ್ದಾರೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಬೋಟ್ ನಲ್ಲಿ ಸುರಕ್ಷತ ಕ್ರಮ ಕೈಗೊಂಡಿದ್ದರೋ ಇಲ್ಲವೋ ಎಂಬ ಬಗ್ಗೆ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಪ್ರವಾಸಿಗರು ಲೈಫ್ ಜಾಕೆಟ್ ಧರಿಸದೇ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ. ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಬೆಂಗ್ರೆ ಬೀಚ್ ನ ಬಳಿ ಈ ದುರಂತ ಸಂಭವಿಸಿದೆ. ಪ್ರವಾಸಿಗರು ಮೈಸೂರಿನ ಸರಸ್ವತಿಪುರಂ ನಿವಾಸಿಗಳು ಎಂದು ತಿಳಿದು ಬಂದಿದೆ. ಬಿಪಿಎಲ್ ಕಾಲ್ ಸೆಂಟರ್ ಉದ್ಯೋಗಿಗಳಾಗಿ ಕೆಲಸ ಮಾಡುತ್ತಿದ್ದರು. 28 ಪ್ರವಾಸಿಗರ ತಂಡ ಉಡುಪಿಗೆ ಬಂದಿತ್ತು. ಎರಡು ಪ್ರವಾಸಿ ಬೋಟ್ ಗಳಲ್ಲಿ ತಲಾ 14 ಜನ ವಿಹಾರಕ್ಕೆಂದು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಸುಹಾನ್ ಮತ್ತು ಸೂಫಿಯಾನ ಮಾಲೀಕತ್ವದ ಟೂರಿಸ್ಟ್ ಬೋಟ್ ನಲ್ಲಿ ಹೋಗಿದ್ದರು.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಪ್ರವಾಸಿಗರ ರಕ್ಷಣೆ
ಇನ್ನೂ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮುಖ್ಯ ಕಡಲತೀರದಲ್ಲಿ ಮೂವರು ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಚಿತ್ರದುರ್ಗ ಮೂಲದ ಮೂವರು ಪ್ರವಾಸಿಗರು, ಮೂವತ್ತು ಸ್ನೇಹಿತರೊಂದಿಗೆ ಗೋಕರ್ಣಕ್ಕೆ ಆಗಮಿಸಿದ್ದರು. ಮೋಜುಮಸ್ತಿಗಾಗಿ ಸಮುದ್ರಕ್ಕೆ ಇಳಿದು ಈಜಾಡುವಾಗ ಅಲೆಯ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದರು. ಆಗ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದರು. ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡರ್ ಗಳು ರಕ್ಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us