/newsfirstlive-kannada/media/media_files/2025/10/14/sudeep-bhandari-2025-10-14-11-03-24.jpg)
ಉಡುಪಿ: ಕಾರ್ಕಳದ ಮಾಜಿ ಶಾಸಕ, ದಿವಂಗತ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ (48) ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟಿದ್ದಾರೆ.
ಇವರ ದುಡುಕಿನ ನಿರ್ಧಾರಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟಿದ್ದಾರೆ. ಹೆಬ್ರಿ ತಾಲೂಕು ನಿವಾಸಿಯಾಗಿರುವ ಸುದೀಪ್ ಭಂಡಾರಿ, ಆರ್ಥಿಕ ಮುಗ್ಗಟ್ಟಿನಿಂದ ಕೆಟ್ಟ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದೆ. ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದರು. ಅಂತ್ಯಂತ ಸರಳ ವ್ಯಕ್ತಿತ್ವ ಹೊಂದಿದ್ದರು.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ತನಿಖೆ ಆರಂಭಿಸಿದ್ದಾರೆ. ಕುಟುಂಬಸ್ಥರನ್ನೂ ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ