/newsfirstlive-kannada/media/media_files/2025/08/23/mahesh-thimarodi-2025-08-23-17-38-51.jpg)
ಉಡುಪಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಇದನ್ನೂ ಓದಿ: ಅಪ್ಪು, ಯಶ್, ತೆಲುಗು ಡೈಲಾಗ್ಗೆ ಲಿಪ್ ಸಿಂಕ್.. ಸ್ವೀಡನ್ ದೇಶದ ದಂಪತಿ ಈಗ ವರ್ಲ್ಡ್ ಫೇಮಸ್; ಯಾರಿವರು..?
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿರನ್ನು ಅರೆಸ್ಟ್ ಮಾಡಿದ್ದರು. ಇದೀಗ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಲಾಗಿದೆ.
ಏನಿದು ಪ್ರಕರಣ..?
ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಎಂಬುವರು, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಮೊನ್ನೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ