/newsfirstlive-kannada/media/media_files/2026/01/01/vinay-hegde-passes-away-2026-01-01-15-23-16.jpg)
ನಿಟ್ಟೆ ಯೂನಿರ್ವಸಿಟಿ ಚಾನ್ಸಲರ್ ವಿನಯ ಹೆಗ್ಡೆ ವಿಧಿವಶ
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ ಎಸ್ ಹೆಗ್ಡೆ ಹಾಸ್ಪಿಟಲ್ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ (86) ನಿಧನ ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಸ್ . ಹೆಗ್ಡೆ ಅವರ ದ್ವಿತೀಯ ಪುತ್ರ ವಿನಯ್ ಹೆಗ್ಡೆ. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸಹೋದರ ವಿನಯ ಹೆಗ್ಡೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿರುವ ನಿಟ್ಟೆ ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞ ವಿನಯ್ ಹೆಗ್ಡೆ ಅವರಾಗಿದ್ದಾರೆ. ನಿಟ್ಟೆ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ವಿನಯ ಹೆಗ್ಡೆ ಮುನ್ನಡೆಸುತ್ತಿದ್ದರು.
/filters:format(webp)/newsfirstlive-kannada/media/media_files/2026/01/01/vinay-hegde-passes-away-1-2026-01-01-15-24-06.jpg)
ವಿನಯ್ ಹೆಗ್ಡೆ ಅವರು ನಿಟ್ಟೆ ಡೀಮ್ಡ್ ಯೂನಿರ್ವಸಿಟಿಯ ಚಾನ್ಸಲರ್ ಕೂಡ ಆಗಿದ್ದರು. ಬೆಂಗಳೂರು, ಉಡುಪಿ ಸೇರಿದಂತೆ ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ವಿದ್ಯಾದಾನ ಮಾಡುತ್ತಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us