/newsfirstlive-kannada/media/post_attachments/wp-content/uploads/2024/10/RAIN-SCHOOL-1.jpg)
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಅನನ್ಯ ಭಟ್ ಕೇಸ್ಗೆ ಬಿಗ್ ಟ್ವಿಸ್ಟ್.. ದೂರು ವಾಪಸ್ ಪಡೆಯುತ್ತೇನೆ ಅಂದ್ರಂತೆ ಸುಜಾತ ಭಟ್..!
10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶ ನೀಡಿದೆ. ಅಲ್ಲದೇ ನಾಳೆ ಒಂದು ದಿನ ಇಡೀ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಇದನ್ನೂ ಓದಿ:ಸ್ಯಾಂಡಲ್ವುಡ್ ಅಂಗಳದಲ್ಲಿ ಹೇಗಿತ್ತು ಗಣೇಶನ ಸಂಭ್ರಮ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ